ನೆಲಮಂಗಲ ಬಳಿ ಚಾಲಕನ ಅಜಾಗರೂಕತೆಯಿಂದ ಲಾರಿಗೆ ಗುದ್ದಿದ ಕೆಎಸ್​ಆರ್​ಟಿಸಿ ಬಸ್; 13 ಜನರಿಗೆ ಗಾಯ, ಆಸ್ಪತ್ರೆಗೆ ದಾಖಲು

ಅರುಣ್​ ಕುಮಾರ್​ ಬೆಳ್ಳಿ

Updated on: Oct 07, 2023 | 6:53 PM

ಮೊಬೈಲ್ ಕೆಮೆರಾದಲ್ಲಿ ಮಾಡಿರುವ ವಿಡಿಯೋದಲ್ಲಿ ಬಸ್ಸಿನ ಎಡಭಾಗಕ್ಕೆ ಆಗಿರುವ ಜಖಂ ನೋಡಿದರೆ, ಬಸ್ ಎಷ್ಟು ಬಲವಾಗಿ ಲಾರಿಗೆ ಗುದ್ದಿದೆ ಅನ್ನೋದು ಗೊತ್ತಾಗುತ್ತದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನೆಲಮಂಗಲ: ಇದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಚಾಲಕನ (KSRTC bus driver) ದಿವ್ಯ ನಿರ್ಲಕ್ಷ್ಯ (negligence) ಮತ್ತು ಅಜಾಗರೂಕತೆ ಅಲ್ಲದೆ ಮತ್ತೇನೂ ಅಲ್ಲ. ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿರುವ ಈ ದೃಶ್ಯ ನೋಡಿ. ನೆಲಮಂಗಲ ತಾಲ್ಲೂಕಿನ ಗುಂಡೇನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 4 (NH4) ರಲ್ಲಿ ನಡೆದ ಅಪಘಾತದ ದೃಶ್ಯವಿದು. ಕಾಂಕ್ರೀಟ್ ಮಿಕ್ಸರ್ ಲಾರಿ ರಸ್ತೆಯನ್ನು ಕ್ರಾಸ್ ಮಾಡುತ್ತಿದ್ದರೂ ಬಸ್ ಚಾಲಕ ವೇಗವನ್ನು ತಗ್ಗಿಸದೆ ಧಡಾರನೆ ಲಾರಿಗೆ ಗುದ್ದುತ್ತಾನೆ. ಬಸ್ ನಲ್ಲಿದ್ದ 13 ಜನರಿಗೆ ಗಾಯಗಳಾಗಿದ್ದು ಅವರನ್ನು ದಾಬಸ್ ಪೇಟೆಯ ಸರ್ಕಾರೀ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೊಬೈಲ್ ಕೆಮೆರಾದಲ್ಲಿ ಮಾಡಿರುವ ವಿಡಿಯೋದಲ್ಲಿ ಬಸ್ಸಿನ ಎಡಭಾಗಕ್ಕೆ ಆಗಿರುವ ಜಖಂ ನೋಡಿದರೆ, ಬಸ್ ಎಷ್ಟು ಬಲವಾಗಿ ಲಾರಿಗೆ ಗುದ್ದಿದೆ ಅನ್ನೋದು ಗೊತ್ತಾಗುತ್ತದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.