ನಡು ರಸ್ತೆಯಲ್ಲೇ ಕೆಎಸ್​ಆರ್​ಟಿಸಿ ಬಸ್ ಜಪ್ತಿ! ಪ್ರಯಾಣಿಕರು ಕಂಗಾಲು

Edited By:

Updated on: Feb 13, 2026 | 12:03 PM

ಕೋರ್ಟ್ ಸಿಬ್ಬಂದಿ ಕೆಎಸ್​ಆರ್​​ಟಿಸಿ ಬಸ್ಸನ್ನು ನಡುರಸ್ತೆಯಲ್ಲೇ ಜಪ್ತಿ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಲು ಆದೇಶಿಸಿ ವರ್ಷಗಳೆ ಕಳೆದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಕೋರ್ಟ್ ದಿಢೀರ್ ಕ್ರಮ ಕೈಗೊಂಡಿದ್ದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದರು.

ಚಿಕ್ಕಮಗಳೂರು, ಫೆಬ್ರವರಿ 13: ಮೃತರ ಕುಟುಂಬಕ್ಕೆ ಪರಿಹಾರ ನೀಡದ ಕಾರಣ ಕೋರ್ಟ್​​ ಸಿಬ್ಬಂದಿ ನಡು ರಸ್ತೆಯಲ್ಲೇ ಕೆಎಸ್‌ಆರ್‌ಟಿಸಿ ಬಸ್ ಜಪ್ತಿ ಮಾಡಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. 2023ರಲ್ಲಿ ನಡೆದ ಅಪಘಾತದಲ್ಲಿ ಬಸ್ ಡಿಕ್ಕಿಯಾಗಿ ರೇಣುಕಪ್ಪ ಹಾಗೂ ರವಿಕಿರಣ್ ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 32 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಪರಿಹಾರ ನೀಡಲು ವಿಳಂಬವಾದ ಹಿನ್ನೆಲೆ ಕೋರ್ಟ್ ಕಠಿಣ ಕ್ರಮಕ್ಕೆ ಮುಂದಾಗಿದೆ.

ಕೆಎಸ್‌ಆರ್‌ಟಿಸಿಗೆ ಸೇರಿದ, ಚಿಕ್ಕಮಗಳೂರು ಡಿಪೋ ವ್ಯಾಪ್ತಿಯ ಯಾವುದೇ ಬಸ್‌ ಅನ್ನು ಜಪ್ತಿ ಮಾಡುವಂತೆ ಕೋರ್ಟ್ ಸೂಚನೆ ನೀಡಿತ್ತು. ಇದರಂತೆ ಬೆಂಗಳೂರು ಕಡೆಗೆ ತೆರಳುತ್ತಿದ್ದ KA 18 F1040 ಸಂಖ್ಯೆಯ ಬಸ್‌ನ್ನು ಕೋರ್ಟ್ ಸಿಬ್ಬಂದಿ ಮಧ್ಯರಸ್ತೆಯಲ್ಲೇ ಜಪ್ತಿ ಮಾಡಿದ್ದಾರೆ. ಇದಕ್ಕೂ ಮುನ್ನ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ನಡು ರಸ್ತೆಯಲ್ಲಿ ಬಸ್ ಜಪ್ತಿ ಮಾಡಿದ ಕ್ರಮಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More