AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಲೋಕಾಪುರ ಬಳಿ ಹಳ್ಳಕ್ಕೆ ನುಗ್ಗಿದ KSRTC ಬಸ್​

ಬಾಗಲಕೋಟೆ: ಲೋಕಾಪುರ ಬಳಿ ಹಳ್ಳಕ್ಕೆ ನುಗ್ಗಿದ KSRTC ಬಸ್​

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Nov 17, 2025 | 2:09 PM

Share

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರು ಕ್ರಾಸ್ ಬಳಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿದೆ. ಸವದತ್ತಿಯಿಂದ ಮಹಾರಾಷ್ಟ್ರದ ಮಿರಜ್‌ಗೆ ಹೊರಟಿದ್ದ ಈ ಬಸ್ ಅಪಘಾತದಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಗಲಕೋಟೆ, ನವೆಂಬರ್​ 17: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್​ ಹಳ್ಳಕ್ಕೆ ನುಗ್ಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರು ಕ್ರಾಸ್ ಬಳಿ ನಡೆದಿದೆ. ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿ ಬಸ್​ ವಾಲಿದ ಪರಿಣಾಮ ಪ್ರಯಾಣಿಕರು ಭಯಭೀತರಾಗಿದ್ದು, ಕಿಟಕಿಗಳಿಂದ ಹೊರ ಬಂದಿದ್ದಾರೆ. ಸವದತ್ತಿಯಿಂದ ಲೋಕಾಪುರ ಮಾರ್ಗವಾಗಿ ಮಹಾರಾಷ್ಟ್ರದ ಮಿರಜ್​​ಗೆ ಬಸ್​ ತೆರಳುತ್ತಿತ್ತು ಎನ್ನಲಾಗಿದೆ. ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 17, 2025 02:08 PM
Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More