ಬಾಗಲಕೋಟೆ: ಲೋಕಾಪುರ ಬಳಿ ಹಳ್ಳಕ್ಕೆ ನುಗ್ಗಿದ KSRTC ಬಸ್
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರು ಕ್ರಾಸ್ ಬಳಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿದೆ. ಸವದತ್ತಿಯಿಂದ ಮಹಾರಾಷ್ಟ್ರದ ಮಿರಜ್‌ಗೆ ಹೊರಟಿದ್ದ ಈ ಬಸ್ ಅಪಘಾತದಲ್ಲಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಗಲಕೋಟೆ, ನವೆಂಬರ್ 17: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಪೆಟ್ಲೂರು ಕ್ರಾಸ್ ಬಳಿ ನಡೆದಿದೆ. ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿ ಬಸ್ ವಾಲಿದ ಪರಿಣಾಮ ಪ್ರಯಾಣಿಕರು ಭಯಭೀತರಾಗಿದ್ದು, ಕಿಟಕಿಗಳಿಂದ ಹೊರ ಬಂದಿದ್ದಾರೆ. ಸವದತ್ತಿಯಿಂದ ಲೋಕಾಪುರ ಮಾರ್ಗವಾಗಿ ಮಹಾರಾಷ್ಟ್ರದ ಮಿರಜ್‌ಗೆ ಬಸ್ ತೆರಳುತ್ತಿತ್ತು ಎನ್ನಲಾಗಿದೆ. ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 17, 2025 02:08 PM
