ಚಾರ್ಮಾಡಿ ಘಾಟ್ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ ಸ್ಟೇರಿಂಗ್ ಕಟ್: ಆಮೇಲೇನಾಯ್ತು?

| Updated By: Ganapathi Sharma

Updated on: Feb 27, 2025 | 10:39 AM

ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಗಮಿಸಿದ್ದ ಭಕ್ತರು ಮರಳಿ ಊರಿಗೆ ತೆರಳಲು ಶಿವಮೊಗ್ಗ ಬಸ್ ಏರಿದ್ದರು. ಆದರೆ, ಆ ಕೆಎಸ್​ಆರ್​​ಟಿಸಿ ಬಸ್ ಚಾರ್ಮಾಡಿ ಘಾಟ್ ತಿರುವಿನಲ್ಲಿ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿ ನಿಂತಿದೆ. ಅದೃಷ್ಟವಶಾತ್, ಚಾಲಕನ ಸಮಯಪ್ರಜ್ಞೆಯಿಂದ ಸಂಭಾವ್ಯ ಅಪಘಾತ ತಪ್ಪಿದೆ. ಬದಲಿ ಬಸ್​ಗಾಗಿ ಪ್ರಯಾಣಿಕರು ರಸ್ತೆಯಲ್ಲಿಯೇ ಕಾದು ಕುಳಿತಿದ್ದಾರೆ.

ಮಂಗಳೂರು, ಫೆಬ್ರವರಿ 27: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾಗಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ.

ಅಪಾಯದ ಅರಿವಾಗುತ್ತಿದ್ದಂತೆಯೇ ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಚಾಲಕ ಹೇಗೋ ನಿಲ್ಲಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್​ನಲ್ಲಿ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ