ಆಗುಂಬೆ ಘಾಟ್​ ತಿರುವಿನಲ್ಲಿ ​ಬಸ್ ಮೇಲೆ ಹತ್ತಿಸಲು ಆಗದೆ ಚಾಲಕನ ಹರಸಾಹಸ!

Edited By:

Updated on: Oct 18, 2026 | 2:21 PM

ಶಿವಮೊಗ್ಗ ಜಿಲ್ಲೆಯ ಆಗುಂಬೆ ಘಾಟ್‌ನ 6ನೇ ತಿರುವಿನಲ್ಲಿ KSRTC ಬಸ್ ಹತ್ತಿಸಲು ಚಾಲಕ ಹರಸಾಹಸ ಪಟ್ಟಿದ್ದಾರೆ. ಚಾಲಕನ ಗಾಬರಿ ಕಂಡು ಪ್ರಯಾಣಿಕರು ಆತಂಕಕ್ಕೊಳಗಾಗಿದ್ದಾರೆ. ಬಳಿಕ ಪ್ರಯಾಣಿಕರನ್ನು ಕೆಳಗಿಳಿಸಲಾಗಿದ್ದು, ಇದರಿಂದ ಘಾಟಿ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. ದೊಡ್ಡ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

ಶಿವಮೊಗ್ಗ, ಅಕ್ಟೋಬರ್ 18: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್‌ನ 6ನೇ ತಿರುವಿನಲ್ಲಿ KSRTC ಬಸ್ ಹತ್ತಿಸಲು ಚಾಲಕ ಹರಸಾಹಸ ಪಟ್ಟಿದ್ದಾರೆ. ಘಾಟ್ ರಸ್ತೆಯ ತಿರುವಿನಲ್ಲಿ ಬಸ್ ಮೇಲೆ ಹತ್ತಲು ವಿಫಲವಾಗಿ ಏಕಾಏಕಿ ನಿಂತ ಕಾರಣ, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಚಾಲಕ ಬಸ್ ಅನ್ನು ಮೇಲೆ ಹತ್ತಿಸಲು ಹಲವು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಇದರಿಂದ ಚಾಲಕ ಗಾಬರಿಗೊಳಗಾಗಿದ್ದು, ಅವರ ಆತಂಕವನ್ನು ಕಂಡ ಪ್ರಯಾಣಿಕರು ತೀವ್ರ ಭೀತಿಗೊಂಡಿದ್ದಾರೆ. ಇಡೀ ಘಟನಾ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಕೊನೆಗೆ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗೆ ಇಳಿಸಲಾಯಿತು. ಬಸ್ ರಸ್ತೆಯ ಮಧ್ಯೆ ನಿಂತ ಕಾರಣ ಆಗುಂಬೆ ಘಾಟ್ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಯಿತು. ಈ ಘಟನೆ ತಾತ್ಕಾಲಿಕವಾಗಿ ಸಂಚಾರಕ್ಕೆ ಅಡ್ಡಿಯುಂಟು ಮಾಡಿತಾದರೂ, ಯಾವುದೇ ಪ್ರಾಣಾಪಾಯ ಸಂಭವಿಸದಿರುವುದು ಸಮಾಧಾನಕರ ಸಂಗತಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಬಸವರಾಜ್​ ಯರಗಣವಿ

ಬಸವರಾಜ್ ಯರಗಣವಿಯವರು ಮೂಲತಃ ಧಾರವಾಡ ಜಿಲ್ಲೆಯವರು. ಇವರು ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ 2008ರ ಏಪ್ರಿಲ್ ನಿಂದ ವೃತ್ತಿ ಆರಂಭಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 3 ವರ್ಷ, ನಂತರ ಹಾವೇರಿ ಜಿಲ್ಲೆಯಲ್ಲಿ 3 ವರ್ಷ ವರದಿಗಾರಿಕೆಯ ಕೆಲಸ ನಿರ್ವಹಿಸಿದ್ದಾರೆ. ಸಧ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಯ ಹಿರಿಯ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯ ರಾಜಕೀಯ, ಅಪರಾಧ, ಮಹತ್ವದ ಬೆಳವಣಿಗೆ ಹಾಗೂ ಮಾನವೀಯ ಸುದ್ದಿಗಳನ್ನು ವರದಿ ಮಾಡಿರುವ ಅನುಭವವಿದೆ.

Read More