ಚಿಕ್ಕಮಗಳೂರು: ಚಲಿಸುತ್ತಿದ್ದಾಗಲೇ ಕಳಚಿಬಿದ್ದ ಕೆಎಸ್‌ಆರ್‌ಟಿಸಿ ಬಸ್‌ ಟೈರ್

Edited By:

Updated on: Oct 15, 2026 | 1:56 PM

ಕ್ಕಮಗಳೂರಿನ ಕೊಪ್ಪದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟೈರ್ ಕಳಚಿಬಿದ್ದಿದೆ. ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿ 50ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿದ್ದಾರೆ. ಕಳಚಿದ ಟೈರ್ ಮತ್ತೊಂದು ವಾಹನಕ್ಕೆ ಹಾನಿ ಮಾಡಿದೆ. ಸಾರಿಗೆ ಬಸ್‌ಗಳ ಕಳಪೆ ನಿರ್ವಹಣೆ ಬಗ್ಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬಸ್‌ಗಳ ಸುರಕ್ಷತಾ ಮಾನದಂಡಗಳ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಚಿಕ್ಕಮಗಳೂರು, ಅ.15: ಸರ್ಕಾರಿ ಬಸ್ಸಿನ ಹೆಡ್​​​​ ಲೈಟ್​​​ ಕೈಕೊಟ್ಟ ಪ್ರಕರಣ ಒಂದು ಕಡೆಯಾದರೆ, ಮತ್ತೊಂದು ಕಡೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಟೈರ್‌ ದಿಢೀರನೆ ಕಳಚಿಬಿದ್ದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ ದುರಂತವೊಂದು ತಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶೃಂಗೇರಿಯಿಂದ ಶಿವಮೊಗ್ಗಕ್ಕೆ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಸೇತುವೆ ಬಳಿ ತಲುಪುತ್ತಿದ್ದಂತೆ ಈ ಅವಘಡ ಸಂಭವಿಸಿದೆ. ಬಸ್ ಚಲಿಸುತ್ತಿದ್ದಾಗ ದಿಢೀರನೆ ಟೈರ್ ಕಳಚಿಬಿದ್ದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಚಾಲಕ ಬಸ್ ಅನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದು, ಇದರಿಂದಾಗುತ್ತಿದ್ದ ಭಾರಿ ಅನಾಹುತ ತಪ್ಪಿದೆ. ಬಸ್‌ನಿಂದ ಕಳಚಿಬಿದ್ದ ಟೈರ್‌ ನಡುರಸ್ತೆಯಲ್ಲಿ ಉರುಳಿ ಹೋಗಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಆ ವಾಹನಕ್ಕೆ ಹಾನಿಯಾಗಿದೆ. ಈ ಬಸ್ ಶಿವಮೊಗ್ಗ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ ಆಗಿದ್ದು. ಘಟನೆ ಸಂಭವಿಸಿದ ಬಳಿಕ ಕಳಚಿದ ಟೈರ್‌ನೊಂದಿಗೆ ಬಸ್ ರಸ್ತೆ ಮಧ್ಯದಲ್ಲೇ ನಿಂತಿದ್ದರಿಂದ ಪ್ರಯಾಣಿಕರು ನಡು ರಸ್ತೆಯಲ್ಲೇ ಕುಳಿತು ಪರದಾಡುವಂತಾಯಿತು. ಸಾರಿಗೆ ಸಂಸ್ಥೆಯ ಬಸ್‌ಗಳ ದುರಸ್ತಿ ಹಾಗೂ ಕಳಪೆ ನಿರ್ವಹಣೆಯ ಸ್ಥಿತಿಯನ್ನು ಕಂಡು ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕಂಗಾಲಾಗಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More