ಚಿಕ್ಕಮಗಳೂರು-ಶೃಂಗೇರಿ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣಿಕರಿಗಿಂತ ತರಕಾರಿ ಮೂಟೆಗಳೇ ಹೆಚ್ಚು: ಸಿಬ್ಬಂದಿ ವಿರುದ್ಧ ಆಕ್ರೋಶ

Edited By:

Updated on: Oct 17, 2026 | 3:17 PM

ಚಿಕ್ಕಮಗಳೂರು-ಶೃಂಗೇರಿ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರಿಗೆ ಬದಲು ತರಕಾರಿ ಸಾಗಿಸುತ್ತಿದೆ. ಹಿಂಬದಿ ಸೀಟುಗಳಲ್ಲಿ ತರಕಾರಿ ಮೂಟೆಗಳನ್ನು ತುಂಬಿರುವುದರಿಂದ ಪ್ರಯಾಣಿಕರು, ವಿಶೇಷವಾಗಿ ವಿದ್ಯಾರ್ಥಿಗಳು, ನೂರು ಕಿಲೋಮೀಟರ್‌ಗಳಿಗೂ ಹೆಚ್ಚು ದೂರ ನಿಂತು ಪ್ರಯಾಣಿಸುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಸಾರಿಗೆ ಇಲಾಖೆಯ ಈ ಅವ್ಯವಸ್ಥೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು, ಅ.17: ಚಿಕ್ಕಮಗಳೂರು-ಶೃಂಗೇರಿ ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತರಕಾರಿ ಮೂಟೆಗಳನ್ನು ಸಾಗಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಾರ್ವಜನಿಕರ ಸಂಚಾರಕ್ಕಾಗಿ ಮೀಸಲಾಗಿರುವ ಈ ಬಸ್‌ಗಳನ್ನು ನಿತ್ಯವೂ ಶೃಂಗೇರಿ ಅಂಗಡಿಗಳಿಗೆ ತರಕಾರಿ ಪೂರೈಸಲು ಬಳಸಲಾಗುತ್ತಿದೆ. ಬಸ್‌ನ ಹಿಂಬದಿ ಸೀಟುಗಳ ಮೇಲೆ ಭಾರೀ ಪ್ರಮಾಣದ ತರಕಾರಿ ಮೂಟೆಗಳನ್ನು ತುಂಬಿರುವುದನ್ನು ಕಾಣಬಹುದು. ಈ ಅವ್ಯವಸ್ಥೆಯಿಂದಾಗಿ ಪ್ರಯಾಣಿಕರಿಗೆ, ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಸೀಟುಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ. ನೂರು ಕಿಲೋಮೀಟರ್‌ಗಳಿಗೂ ಹೆಚ್ಚು ದೂರ ಪ್ರಯಾಣಿಕರು ನಿಂತುಕೊಂಡೇ ಸಾಗುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಬಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಈ ಕ್ರಮದ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸರಿಯಾದ ಸಮಯಕ್ಕೆ ಬಸ್‌ಗಳು ಲಭ್ಯವಿಲ್ಲದೆ ವಿದ್ಯಾರ್ಥಿಗಳು ಪ್ರತಿದಿನ ಪರದಾಡುತ್ತಿದ್ದಾರೆ. ಚಿಕ್ಕಮಗಳೂರು, ಬಾಳೆಹೊನ್ನೂರು, ಶೃಂಗೇರಿ ಮಾರ್ಗವಾಗಿ ಸಂಚರಿಸುವ ಬಸ್‌ಗಳಲ್ಲಿ ಈ ರೀತಿಯ ಅವ್ಯವಸ್ಥೆ ವ್ಯಾಪಕವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More