ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಅನಾಹುತ

Edited By:

Updated on: Aug 09, 2026 | 6:13 PM

ಕೊಪ್ಪಳ ತಾಲೂಕಿನ ಚಿಕ್ಕಬಗನಾಳ ಗ್ರಾಮದ ಬಳಿ KSRTC ಬಸ್‌ನ ಟೈರ್ ಬ್ಲಾಸ್ಟ್ ಆಗಿ ಬಸ್ ಗದ್ದೆಗೆ ನುಗ್ಗಿದೆ. ಕೊಪ್ಪಳದಿಂದ ಕರ್ಕಿಹಳ್ಳಿಗೆ ತೆರಳುತ್ತಿದ್ದ ಈ ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಡಿಯೋ ನೋಡಿ.

ಕೊಪ್ಪಳ, ಆಗಸ್ಟ್​ 09: ಜಿಲ್ಲೆಯ ಕೊಪ್ಪಳ ತಾಲೂಕಿನ ಚಿಕ್ಕಬಗನಾಳ ಗ್ರಾಮದ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್‌ನ ಟೈರ್ ಏಕಾಏಕಿ ಸ್ಫೋಟವಾಗಿದ್ದು, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಗೆ ನುಗ್ಗಿದ ಘಟನೆ ನಡೆದಿದೆ. ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಪ್ಪಳದಿಂದ ಕಕೇಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಟೈರ್ ಸ್ಫೋಟಗೊಳ್ಳುತ್ತಿದ್ದಂತೆಯೇ ಚಾಲಕನ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More