Karnataka Transport Strike; ಸಾರ್ವಜನಿಕ ಸೇವೆಯಲ್ಲಿರುವವರು ಜನರಿಗೆ ತೊಂದರೆಯಾಗದಂತೆ ವರ್ತಿಸಬೇಕು: ಶಿವಕುಮಾರ್
ಸಾರಿಗೆ ನೌಕರರ ಹಠ ಅರ್ಥವಾಗೋದಿಲ್ಲ, ಯಾಕೆಂದರೆ ಸಾರ್ವಜನಿಕ ಸೇವೆ ಮಾಡುವ ಉದ್ದೇಶದಿಂದ ಅವರು ಸಾರಿಗೆ ಸಂಸ್ಥೆಯಲ್ಲಿ ಕೆಲಸಕ್ಕೆ ಬಂದಿದ್ದಾರೆ, ಇದು ಸಾಮಾಜ ಸೇವೆಯಲ್ಲದೆ ಮತ್ತೇನೂ ಅಲ್ಲ, ಸಾರ್ವಜನಿಕ ಹಿತಾಸಕ್ತಿ ಬಹಳ ಮುಖ್ಯ, ನೌಕರರು ವಿನಾಕಾರಣ ಗೊಂದಲ ಸೃಷ್ಟಿಸುವ ಬದಲು ಕೆಲಸಕ್ಕೆ ಹಾಜರಾಗಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರು, ಆಗಸ್ಟ್ 5: ಸಾರಿಗೆ ನೌಕರರ ಬೇಡಿಕೆಗಳು ನ್ಯಾಯಸಮ್ಮತವಲ್ಲ ಎಂದು ಸರ್ಕಾರ ಯಾವತ್ತೂ ಹೇಳಿಲ್ಲ, ಆದರೆ ಅವರು ಸರ್ಕಾರದ ಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಮುಷ್ಕರದಿಂದ ಜನಸಾಮಾನ್ಯರು ಹೆಚ್ಚು ತೊಂದರೆಗೊಳಗಾಗುತ್ತಾರೆ ಅನ್ನೋದನ್ನು ಸಾರಿಗೆ ನೌಕರರು ಮನದಟ್ಟು ಮಾಡಿಕೊಳ್ಳಬೇಕು, ಹಾಗಾಗಿ ತಾನು ಅವರಿಗೆ ಮುಷ್ಕರವನ್ನು ಕೂಡಲೇ ನಿಲ್ಲಿಸಿ ಕೆಲಸಕ್ಕೆ ಮರಳುವಂತೆ ಅಪೀಲ್ ಮಾಡುತ್ತೇನೆ ಎಂದು ಶಿವಕುಮಾರ್ ಹೇಳಿದರು.
ಇದನ್ನೂ ಓದಿ: Karnataka Transport Strike: ಸಾರಿಗೆ ಮುಷ್ಕರ: ಹಲವೆಡೆ ರಸ್ತೆಗಿಳಿಯದ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ಗಳು
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
