Raichur: KSRTC ಸ್ಲೀಪರ್ ಬಸ್ ಪಲ್ಟಿ; ತಪ್ಪಿದ ಭಾರೀ ದುರಂತ
ಚಾಲಕನ ನಿಯಂತ್ರಣ ತಪ್ಪಿ KSRTC ಸ್ಲೀಪರ್ ಬಸ್ ಪಲ್ಟಿಯಾಗಿರುವ ಘಟನೆ ರಾಯಚೂರು ನಗರದ ಹೊರವಲಯ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆ ಕಡೆಯಿಂದ ರಾಯಚೂರಿನತ್ತ ಬರುತ್ತಿದ್ದ ವೇಳೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡಿದೆ.
ರಾಯಚೂರು, ಸೆಪ್ಟೆಂಬರ್ 26: ನಗರದ ಹೊರವಲಯ ಸಾಥಮೈಲ್ ಕ್ರಾಸ್ ಬಳಿ KSRTC ಸ್ಲೀಪರ್ ಬಸ್ ಪಲ್ಟಿಯಾಗಿದೆ. ಬಸ್ನಲ್ಲಿದ್ದ 15 ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಪ್ರಯಾಣಿಕ ವಿಶ್ವನಾಥ್ ಎಂಬುವವರ ಕಾಲು ಮುರಿದಿದ್ದು, ರಿಮ್ಸ್ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ದಾವಣಗೆರೆ ಕಡೆಯಿಂದ ರಾಯಚೂರಿನತ್ತ ಬರುತ್ತಿದ್ದ ಸ್ಲೀಪರ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಮಳೆ ನಡುವೆಯೂ ರಕ್ಷಣಾ ಕಾರ್ಯ ನಡೆಸಲಾಗಿದೆ.
ಮತ್ತಷ್ಟು ವಿಡಿಯೋಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Sep 26, 2025 12:44 PM
