Karnataka Transport Strike: ಬೆಳಗಾವಿಯಲ್ಲಿ ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಿಸುತ್ತಿರುವ ಪೊಲೀಸ್ ಕಮೀಷನರ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 05, 2025 | 11:10 AM

ಕೆಎಸ್ಆರ್​ಟಿಸಿ ಬೆಳಗಾವಿ ವಿಭಾಗದ ಡ್ರೈವರ್ ಮತ್ತು ಕಂಡಕ್ಟರ್ ಸ್ವಯಂಪ್ರೇರಿತರಾಗಿ ಬಸ್​​ಗಳನ್ನು ಓಡಿಸಲು ಮುಂದಾದರೆ ಸಿಬ್ಬಂದಿ ಮತ್ತು ವಾಹನಗಳಿಗೆ ಬೆಳಗಾವಿ ನಗರ ವ್ಯಾಪ್ತಿಯವರೆಗೆ ಭದ್ರತೆಯನ್ನು ಕಲ್ಪಿಸಲಾಗುವುದು ಎಂದು ಪೊಲೀಸ್ ಕಮೀಷನರ್ ಹೇಳಿದರು. ಪೊಲೀಸ್ ಎಸ್ಕಾರ್ಟ್ ಒದಗಿಸಲಾಗುತ್ತಿದೆ ಮತ್ತು ಯಾರಾದರೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗಳಿಗೆ ಹಾನಿಯನ್ನುಂಟು ಮಾಡಿದರೆ ಕಾನೂನು ರೀತ್ಯಾ ಕ್ರಮ ಜರುಗಿಸುತ್ತೇವೆ ಎಂದು ಬೊರಸೆ ಹೇಳಿದರು.

ಬೆಳಗಾವಿ, ಆಗಸ್ಟ್ 5: ಹೈಕೋರ್ಟ್ ಆದೇಶದ ಹೊರತಾಗಿಯೂ ಕೆಎಸ್​ಆರ್​​ಟಿಸಿ ನೌಕರರು ಮಧ್ಯರಾತ್ರಿಯಿಂದಲೇ ಮುಷ್ಕರ ಆರಂಭಿಸಿದ್ದಾರೆ. ಬೆಳಗಾವಿಯಲ್ಲಿ ಮುಷ್ಕರದ ಪ್ರಭಾವ ನಿಚ್ಚಳವಾಗಿ ಕಾಣುತ್ತಿದೆ. ಕೇಂದ್ರೀಯ ಬಸ್​ ನಿಲ್ದಾಣದಲ್ಲಿ ಜನ ಬಸ್​ಗಳಿಲ್ಲದೆ ಪರದಾಡುತ್ತಿದ್ದಾರೆ. ಬೆಳಗಾವಿ ವಿಭಾಗದ ಪೊಲೀಸ್ ಕಮೀಷನರ್ ಭೂಷನ್ ಗುಲಾಬರಾವ್ ಬೊರಸೆ ಮತ್ತು ಮತ್ತು ಡಿಸಿಪಿ ನಾರಾಯಣ ಬರ್ಮನಿ (Narayana Barmani) ಅವರು ತಮ್ಮ ಸಿಬ್ಬಂದಿಯೊಂದಿಗೆ ಕೇಂದ್ರೀಯ ಬಸ್ ನಿಲ್ದಾಣದಲ್ಲಿರುವ ಜನರನ್ನು ಖಾಸಗಿ ಬಸ್ಸು ಮತ್ತು ವಾಹನಗಳ ಮೂಲಕ ಅವರವರ ಊರುಗಳಿಗೆ ಕಳಿಸುವ ವ್ಯವಸ್ಥೆ ಮಾಡುತ್ತಿದ್ದಾರೆ. ನಮ್ಮ ವರದಿಗಾರನೊಂದಿಗೆ ಮಾತಾಡಿರುವ ಕಮೀಷನರ್ ಬೆಳಗ್ಗೆ 5.30 ರಿಂದಲೇ ಜಿಲ್ಲೆಯಲ್ಲಿ ಪೊಲೀಸರು ಕಾರ್ಯನಿರತರಾಗಿದ್ದಾರೆ ಎಂದರು.

ಇದನ್ನೂ ಓದಿ:  KSRTC, BMTC Employees Strike: ಆಗಸ್ಟ್ 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ    

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.