ಡಿ 31ರಿಂದ ಬಸ್ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿದ ನೌಕರರು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಆರು ಸಾರಿಗೆ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದಲ್ಲಿ ಡಿಸೆಂಬರ್ 31ರಿಂದ ಮುಷ್ಕರಕ್ಕೆ ಈಗಾಗಲೇ ಕರೆ ನೀಡಿದೆ. ಹಾಗಾಗಿ ಇಂದು ಯಾದಗಿರಿಯಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಸಾರಿಗೆ ನೌಕರರಿಂದ ಜನರಿಗೆ ಕರಪತ್ರ ಹಂಚಿಕೆ ಮಾಡಲಾಗಿದೆ.
ಯಾದಗಿರಿ, ಡಿಸೆಂಬರ್ 25: ವಿವಿಧ ಬೇಡಿಕೆಗಳನ್ನ ಈಡೇರಿಸುವ ಆಗ್ರಹಿಸಿ ಡಿಸೆಂಬರ್ 31ರಿಂದ ಸಾರಿಗೆ ನೌಕರರ ಮುಷ್ಕರ (strike) ಹಿನ್ನಲೆ ನಗರದಲ್ಲಿ ಪ್ರಯಾಣಿಕರಿಗೆ ಸಾರಿಗೆ ನೌಕರರಿಂದ ಕರ ಪತ್ರ ಹಂಚಿಕೆ ಮಾಡಲಾಗಿದೆ. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಕರಪತ್ರ ಹಂಚಿಕೆ ಮಾಡಲಾಗಿದೆ. ಡಿ. 31 ರಿಂದ ಬಸ್ಗಳ ಸಂಚಾರವಿಲ್ಲ ಪ್ರಯಾಣಿಕರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 25, 2024 05:38 PM
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
