AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬ ಪ್ರಯಾಣಿಕನಿಗಾಗಿ ಒಂದೂವರೆ ಗಂಟೆ ಬಸ್ ತಡೆದ ಚಾಲಕ-ನಿರ್ವಾಹಕ: ವೀಡಿಯೋ ವೈರಲ್

ಒಬ್ಬ ಪ್ರಯಾಣಿಕನಿಗಾಗಿ ಒಂದೂವರೆ ಗಂಟೆ ಬಸ್ ತಡೆದ ಚಾಲಕ-ನಿರ್ವಾಹಕ: ವೀಡಿಯೋ ವೈರಲ್

ಜಗದೀಶ ಬಿ.
| Edited By: |

Updated on: Oct 14, 2026 | 2:38 PM

Share

ತುಮಕೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಒಬ್ಬನೇ ಒಬ್ಬ ಪ್ರಯಾಣಿಕನಿಗಾಗಿ ಬಸ್‌ ಅನ್ನು ಬರೋಬ್ಬರಿ ಒಂದೂವರೆ ಗಂಟೆ ತಡೆ ಹಿಡಿದ ಘಟನೆ ಭಾರಿ ವಿವಾದ ಸೃಷ್ಟಿಸಿದೆ. ಇದನ್ನು ಪ್ರಶ್ನಿಸಿದ ಮಹಿಳೆಯೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸದ್ಯ ವೈರಲ್ ಆಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಸ್ಪರ ವಿಭಿನ್ನ ಕಾರಣಗಳನ್ನು ನೀಡಿದ್ದು, ಸಾರ್ವಜನಿಕರು ಕೆಎಸ್‌ಆರ್‌ಟಿಸಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ತುಮಕೂರು, ಅ.14: ಒಬ್ಬ ಪ್ರಯಾಣಿಕನಿಗಾಗಿ ಕೆಎಸ್‌ಆರ್‌ಟಿಸಿ (KSRTC) ಬಸ್ ಅನ್ನು ಬರೋಬ್ಬರಿ ಒಂದೂವರೆ ಗಂಟೆಗಳ ಕಾಲ ತಡೆದು ನಿಲ್ಲಿಸಿದ ಘಟನೆಯು ತುಮಕೂರು ನಗರದ KSRTC ಬಸ್ ನಿಲ್ದಾಣದಲ್ಲಿ ನಡೆದಿದೆ. ನಿಗದಿತ ಸಮಯಕ್ಕಿಂತ ಹೆಚ್ಚು ಸಮಯ ಬಸ್ ಹೊರಡದೆ ನಿಂತಿರುವುದನ್ನು ಪ್ರಶ್ನಿಸಿದ ಮಹಿಳೆಯೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮನಹಳ್ಳಿಗೆ ತೆರಳಬೇಕಿದ್ದ KSRTC ಬಸ್ ನಿನ್ನೆ ಸಂಜೆ 6:30ಕ್ಕೆ ಬಸ್ ನಿಲ್ದಾಣದಿಂದ ಹೊರಡಬೇಕಿತ್ತು. ಆದರೆ ರಾತ್ರಿ 8 ಗಂಟೆಯಾದರೂ ಬಸ್ ಅಲ್ಲಿಂದ ಕದಲದೆ ನಿಂತಿತ್ತು. ಬೆಂಗಳೂರಿನಿಂದ ಬರುವ ನಿರ್ದಿಷ್ಟ ಪ್ರಯಾಣಿಕರೊಬ್ಬರಿಗಾಗಿ ಬಸ್ ಅನ್ನು ಕಾಯಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಬಸ್‌ನಲ್ಲಿದ್ದ ಮಹಿಳೆ ಆರೋಪಿಸಿದ್ದಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿ, ಬಸ್‌ನ ಚಾಲಕ ಹಾಗೂ ನಿರ್ವಾಹಕರು ಮಾತ್ರ “ಬಸ್‌ನ ಟೈರ್ ಬರ್ಸ್ಟ್ ಆಗಿರುವುದರಿಂದ ಬಸ್ ವಿಳಂಬವಾಗಿದೆ” ಎಂದು ವಿಭಿನ್ನ ಕಾರಣಗಳನ್ನು ನೀಡಿದ್ದಾರೆ. ಹೀಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದಿಂದ ನಡುವೆ ಗೊಂದಲ ಉಂಟಾಗಿರುವುದರಿಂದ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಯಿತು. ಕೊನೆಗೆ ಪೊಲೀಸರು ಸ್ಥಳಕ್ಕೆ ಬಂದರೂ, ಸುಮಾರು 45 ನಿಮಿಷಗಳ ಕಾಲ ತಡೆಹಿಡಿಯಲಾಗಿದೆ ಎಂದು ಆರೋಪಿಸಲಾಗಿದೆ. ಒಬ್ಬರಿಗಾಗಿ ನೂರಾರು ಪ್ರಯಾಣಿಕರನ್ನು ಗಂಟೆಗಟ್ಟಲೆ ಕಾಯಿಸುವುದು ಎಷ್ಟು ಸರಿ ಎಂದು ಬಸ್‌ನಲ್ಲಿದ್ದ ಮಹಿಳೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಸ್ ವಿಳಂಬಕ್ಕೆ ನಿಖರವಾದ ಕಾರಣವನ್ನು ತಿಳಿಸಬೇಕು ಹಾಗೂ ಈ ರೀತಿಯ ಬೇಜವಾಬ್ದಾರಿ ತೋರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More