ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ: ಭಕ್ತರಿಗೆ ಮಹತ್ವದ ಸೂಚನೆ

Updated By: Ganapathi Sharma

Updated on: May 26, 2025 | 12:22 PM

ಭಾರಿ ಮಳೆಯ ಕಾರಣ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟದ ಬಳಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ದೇಗುಲದ ಆಡಳಿತ ಮಂಡಳಿ ಭಕ್ತರಿಗೆ ಮಹತ್ವದ ಸೂಚನೆ ನೀಡಿದೆ. ಸ್ನಾನಘಟ್ಟ ಮುಳುಗಡೆಯ ವಿಡಿಯೋ ಹಾಗೂ ದೇಗುಲದ ಆಡಳಿತ ಮಂಡಳಿಯ ಸಲಹೆ ಸೂಚನೆ ಮಾಹಿತಿ ಇಲ್ಲಿದೆ.

ಮಂಗಳೂರು, ಮೇ 26: ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಭಕ್ತರು ಸ್ನಾನಘಟ್ಟದ ಬಳಿ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಕ್ತರು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ದೇವಸ್ಥಾನದ ಆಡಳಿತವು ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ