ಕಂಗನಾ ಕೆನ್ನೆಗೆ ಹೊಡೆದಿದ್ದು ಯಾಕೆ? ಕಾರಣ ತಿಳಿಸಿದ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ
ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ಅವರ ಕೆನ್ನೆಗೆ ಬಾರಿಸಿದ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರು ರೈತ ಕುಟುಂಬದಿಂದ ಬಂದವರು. ಕಂಗನಾಗೆ ಕಪಾಳಮೋಕ್ಷ ಮಾಡಿದ ಬಳಿಕ ವಿಮಾನ ನಿಲ್ದಾಣದಲ್ಲಿ ಕುಲ್ವಿಂದರ್ ಕೌರ್ ಆಕ್ರೋಶದಿಂದ ಕೂಗಾಡಿದ ವಿಡಿಯೋ ಲಭ್ಯವಾಗಿದೆ. ಘಟನೆ ನಂತರ ಅವರನ್ನು ವಶಕ್ಕೆ ಪಡೆಯಲಾಗಿದೆ.
ನೂತನವಾಗಿ ಆಯ್ಕೆ ಆಗಿರುವ ಮಂಡಿ ಸಂಸದೆ, ನಟಿ ಕಂಗನಾ ರಣಾವತ್ (Kangana Ranaut) ಅವರು ಚಂಡಿಗಢ ವಿಮಾನ ನಿಲ್ದಾಣಕ್ಕೆ ಬಂದಾಗ ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಐಎಸ್ಎಫ್ (CISF) ಸಿಬ್ಬಂದಿ ಕುಲ್ವಿಂದರ್ ಕೌರ್ ಅವರು ಕೆನ್ನೆಗೆ ಬಾರಿಸಿದ್ದಾರೆ. ಕಂಗನಾಗೆ ಕಪಾಳಮೋಕ್ಷ ಮಾಡಿದ್ದು ಯಾಕೆ ಎಂಬುದನ್ನು ಕೂಡ ಅವರು ಹೇಳಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಕುಲ್ವಿಂದರ್ ಕೌರ್ ಅವರ ತಾಯಿ 2020-21ರಲ್ಲಿ ನಡೆದ ರೈತರ ಚಳುವಳಿಯಲ್ಲಿ ಭಾಗಿ ಆಗಿದ್ದರು. ಆಗ ಕಂಗನಾ ಅವರು ರೈತ ಚಳುವಳಿ ವಿರುದ್ಧ ಹೇಳಿಕೆ ನೀಡಿದ್ದರು. ಆ ಹೇಳಿಕೆಯಿಂದ ಆಕ್ರೋಶಕ್ಕೆ ಒಳಗಾಗಿದ್ದ ಕುಲ್ವಿಂದರ್ ಕೌರ್ ಅವರು ಇಂದು (ಜೂನ್ 6) ಕಂಗನಾಗೆ ಕಪಾಳಮೋಕ್ಷ ಮಾಡಿದ್ದಾರೆ. ಈಗ ಕುಲ್ವಿಂದರ್ ಕೌರ್ (Kulwinder Kaur) ಅವರನ್ನು ವಶಕ್ಕೆ ಪಡೆಯಲಾಗಿದೆ. ಸೂಕ್ತ ತನಿಖೆ ನಡೆಯುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.