ರಶ್ಮಿಕಾ, ದೀಪಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ

Updated on: May 25, 2025 | 9:38 AM

ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಮೈಸೂರು ಸ್ಯಾಂಡಲ್ ಸೋಪ್ ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಿದ್ದಕ್ಕೆ ಟೀಕೆ ವ್ಯಕ್ತ ಆಗುತ್ತಿದೆ. ಈ ಬಗ್ಗೆ ಕುಮಾರ್ ಬಂಗಾರಪ್ಪ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಕನ್ನಡದ ಕಲಾವಿದರಿಗೆ ಅವಕಾಶ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು ಎಂದು ಅವರು ಹೇಳಿದ್ದಾರೆ.

ಮೈಸೂರು ಸ್ಯಾಂಡಲ್ ಸೋಪ್ (Mysore Sandal Soap) ಪ್ರಚಾರ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ನೇಮಕ ಮಾಡಿದ್ದಕ್ಕೆ ಟೀಕೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಕುಮಾರ್ ಬಂಗಾರಪ್ಪ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ (Rashmika Mandanna) ಅವರಂತಹ ಕನ್ನಡದ ಕಲಾವಿದರಿಗೆ ಅವಕಾಶ ನೀಡಿದ್ದರೆ ಚೆನ್ನಾಗಿರುತ್ತಿತ್ತು. ಈ ನಟಿಯರು ಕೂಡ ಜಾಗತಿಕ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ. ಅವರಿಗೆ ಅವಕಾಶ ಕೊಟ್ಟಿದ್ದರೆ ಕನ್ನಡಿಗರಿಗೆ ಖುಷಿ ಆಗುತ್ತಿತ್ತು ಎಂಬುದು ಒಂದು ಕಡೆ. ಇನ್ನೊಂದು ಕಡೆ, ಬೇರೆ ರಾಜ್ಯದ ನಟಿಯರು ಪ್ರಚಾರ ಮಾಡಿದ್ದಕ್ಕೆ ಮೈಸೂರು ಸ್ಯಾಂಡಲ್ ಸೋಪಿಗೆ ಅನುಕೂಲ ಆಗುತ್ತದೆ ಎಂದರೆ ಅದು ಕೂಡ ಒಳ್ಳೆಯದು. ಯಾವುದೇ ಸಮಸ್ಯೆ ಇಲ್ಲ ಎನಿಸುತ್ತದೆ’ ಎಂದು ಕುಮಾರ್ ಬಂಗಾರಪ್ಪ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.