‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರಕ್ಕೆ ಸಿದ್ದರಾಮಯ್ಯ ಸಹಕಾರ ನೆನೆದ ಕುಮಾರ್ ಬಂಗಾರಪ್ಪ

Updated on: May 12, 2026 | 9:51 PM

ಖ್ಯಾತ ನಟ ಕುಮಾರ್ ಬಂಗಾರಪ್ಪ ಅವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಕುಮಾರ್ ಬಂಗಾರಪ್ಪ ಅವರು ಸಿದ್ದರಾಮಯ್ಯ, ನರೇಂದ್ರ ಮೋದಿ ಮುಂತಾದವರಿಗೆ ಧನ್ಯವಾದ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ..

ಖ್ಯಾತ ನಟ ಕುಮಾರ್ ಬಂಗಾರಪ್ಪ ಅವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ (Sarkari Nyaya Bele Angadi) ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ಇತ್ತೀಚೆಗೆ ನಡೆಯಿತು. ಈ ವೇಳೆ ಕುಮಾರ್ ಬಂಗಾರಪ್ಪ ಅವರು ಸಿದ್ದರಾಮಯ್ಯ (Siddaramaiah), ನರೇಂದ್ರ ಮೋದಿ ಮುಂತಾದವರಿಗೆ ಧನ್ಯವಾದ ತಿಳಿಸಿದರು. ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರಿಗಾಗಿ ಆಹಾರ ಭದ್ರತೆ ಕಾಯ್ಕೆ ಪ್ರಕಾರ ದಿನಸಿ ನೀಡುತ್ತವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಸಿನಿಮಾದ ಹಾಡನ್ನು ಬಹಳ ಖುಷಿಯಿಂದ ಬಿಡುಗಡೆ ಮಾಡಿದರು. ಈ ಸಿನಿಮಾದಲ್ಲಿ ಪ್ರತಿ ಪಾತ್ರವೂ ವಿಶೇಷವಾಗಿದೆ. ಆ ಎಲ್ಲ ಪಾತ್ರಗಳು ಸೇರಿ ಸಿನಿಮಾ ಆಗಿದೆ. ಇಡೀ ತಂಡ ಈ ಚಿತ್ರಕ್ಕಾಗಿ ಬಹಳ ಶ್ರಮಪಟ್ಟಿದೆ’ ಎಂದು ಕುಮಾರ್ ಬಂಗಾರಪ್ಪ (Kumar Bangarappa) ಅವರು ಹೇಳಿದರು. ಈ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ಕೂಡ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us