ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ಮತ್ತು ಕುಮಾರ್ ಬಂಗಾರಪ್ಪ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ನಟಿಸಿದ ಅನುಭವಗಳನ್ನು ಕುಮಾರ್ ಬಂಗಾರಪ್ಪ ಅವರು ಹಂಚಿಕೊಂಡರು. ಸುದ್ದಿಗೋಷ್ಠಿಯ ವೇದಿಕೆಯಲ್ಲಿ ಅವರು ಮಾತನಾಡಿದ ವಿಡಿಯೋ ಇಲ್ಲಿದೆ.
‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ರಾಗಿಣಿ ದ್ವಿವೇದಿ ಮತ್ತು ಕುಮಾರ್ ಬಂಗಾರಪ್ಪ ಅವರು ಜೋಡಿಯಾಗಿ ನಟಿಸಿದ್ದಾರೆ. ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ನಟಿಸಿದ ಅನುಭವಗಳನ್ನು ಕುಮಾರ್ ಬಂಗಾರಪ್ಪ ಅವರು ಹಂಚಿಕೊಂಡರು. ತಮ್ಮ ಜೊತೆ ನಟಿಸಿದ ರಾಗಿಣಿ (Ragini Dwivedi) ಅವರನ್ನು ಕುಮಾರ್ ಬಂಗಾರಪ್ಪ ಹೊಗಳಿದರು. ‘ರಾಗಿಣಿ ಅವರು ಉತ್ತಮ ನಟಿ. ಬಹಳ ಬದ್ಧತೆಯಿಂದ ಈ ಸಿನಿಮಾ ಮಾಡಿದ್ದಾರೆ. ಅವರಿಗೆ ಇದ್ದ ಇಮೇಜ್ ಬದಲಿಸುವ ಪಾತ್ರ ಇದು. ಹಾಡುಗಳ ಮೂಲಕ ಅವರು ಪ್ರತಿ ಹಳ್ಳಿಗೂ ತಲುಪಿದ್ದಾರೆ. ಆದರೆ ಈ ಬಾರಿ ಅವರು ತಲುಪುವ ರೀತಿಯೇ ಬೇರೆ ಇರುತ್ತದೆ. ಅವರಿಗೆ ದೇವರು ಒಳ್ಳೆಯದು ಮಾಡಲಿ. ನಾನು ಅವರಿಗೆ ಹಾರೈಸುತ್ತೇನೆ’ ಎಂದು ಕುಮಾರ್ ಬಂಗಾರಪ್ಪ ಅವರು ಹೇಳಿದ್ದಾರೆ. ಈ ವೇಳೆ ಪಕ್ಕದಲ್ಲೇ ನಿಂತಿದ್ದ ರಾಗಿಣಿ ದ್ವಿವೇದಿ ಅವರು ಖುಷಿಯಿಂದ ತಬ್ಬಿಕೊಂಡರು. ಸುದ್ದಿಗೋಷ್ಠಿಯ ವೇದಿಕೆಯಲ್ಲಿ ಕುಮಾರ್ ಬಂಗಾರಪ್ಪ ಅವರು ಮಾತನಾಡಿದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

