ಕುಮಾರ ಬಂಗಾರಪ್ಪ ತಿರುಕನ ಕನಸು ಕಾಣುತ್ತಿದ್ದಾರೆ, ರಾಜ್ಯಾಧ್ಯಕ್ಷನ ಬದಲಾವಣೆ ಇಲ್ಲ: ರೇಣುಕಾಚಾರ್ಯ
ಕುಮಾರ್ ಬಂಗಾರಪ್ಪ ಸೊರಬ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿ ಮಂತ್ರಿಯಾಗಿ ಕೆಲಸ ಮಾಡಿದರೂ ಸೊರಬವನ್ನು ಅಭಿವೃದ್ಧಿ ಮಾಡಿಲ್ಲ, ಜನಪ್ರತಿನಿಧಿಯಾಗಿ ಜನಸೇವೆ ಮಾಡೋದು ಬಿಟ್ಟು ಅವರು ತಮ್ಮದೇ ಸಾಮ್ರಾಜ್ಯ ಕಟ್ಟಿಕೊಂಡು ಓಡಾಡಿದರು, ಸೊರಬದಲ್ಲಿ ಬಿಜೆಪಿ ಸೊರಗುವಂತೆ ಮಾಡಿದ ಕುಖ್ಯಾತಿಯೂ ಅವರಿಗೆ ಸಲ್ಲುತ್ತದೆ ಎಂದು ರೇಣುಕಾಚಾರ್ಯ ಹೇಳಿದರು.
ದಾವಣಗೆರೆ: ದಾವಣಗೆರೆಯಲ್ಲಿ ಇಂದು ಸುದ್ದಿಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ, ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನ ಬದಲಾವಣೆಯಾಗಲಿದೆ ಎಂದಿರುವ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಹರಿಹಾಯ್ದರು. ಅವರೇನು ತಿರುಕನ ಕನಸು ಕಾಣುತ್ತಿದ್ದಾರೆಯೇ ಅಥವಾ ಬಿಜೆಪಿ ರಾಜ್ಯಾಧ್ಯಕ್ಷನನ್ನು ಬದಲಾವಣೆ ಮಾಡುವುದನ್ನು ಹುಡುಗಾಟ ಅಂದುಕೊಂಡಿದ್ದಾರೆಯೇ? ಯಾವ ಬದಲಾವಣೆಯೂ ಆಗೋದಿಲ್ಲ, ಬಿವೈ ವಿಜಯೇಂದ್ರ ಅವರೇ ಅಧ್ಯಕ್ಷನ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ರೇಣುಕಾಚಾರ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವಿಜಯೇಂದ್ರ ಒಬ್ಬ ಮಾಸ್ ಲೀಡರ್, ಪಕ್ಷ ಮುನ್ನಡೆಸುವ ಸಾಮರ್ಥ್ಯ ಅವರಲ್ಲಿದೆ: ಎಂಪಿ ರೇಣುಕಾಚಾರ್ಯ