AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಕೃಪಾ ಗೆಸ್ಟ್ ಹೌಸ್​ಗೆ ಗಂಗಾ ಎಂದು ಮರುನಾಮಕರಣ: ಇನ್ನು ಇದುವೇ ಸಿಎಂ ಅಧಿಕೃತ ನಿವಾಸ

ಕುಮಾರಕೃಪಾ ಗೆಸ್ಟ್ ಹೌಸ್​ಗೆ ಗಂಗಾ ಎಂದು ಮರುನಾಮಕರಣ: ಇನ್ನು ಇದುವೇ ಸಿಎಂ ಅಧಿಕೃತ ನಿವಾಸ

ಪ್ರಸನ್ನ ಗಾಂವ್ಕರ್​
| Edited By: |

Updated on: Nov 16, 2026 | 7:12 AM

Share

ಸಿಎಂ ಡಿಕೆ ಶಿವಕುಮಾರ್ ಕುಮಾರಕೃಪಾ ಕೆಕೆ ಗೆಸ್ಟ್ ಹೌಸ್‌ಗೆ ಗಂಗಾ ಎಂದು ಮರುನಾಮಕರಣ ಮಾಡಿದ್ದು, ಇದನ್ನು ತಮ್ಮ ಅಧಿಕೃತ ನಿವಾಸವನ್ನಾಗಿ ಪರಿವರ್ತಿಸಿದ್ದಾರೆ. ನವೀಕರಿಸಿದ ಕಟ್ಟಡದಲ್ಲಿ ಕೊಠಡಿಗಳಿಗೂ ನದಿಗಳ ಹೆಸರಿಡಲಾಗಿದೆ. ರಾತ್ರಿ ಪೂಜೆ ನೆರವೇರಿದ್ದು, ಇಂದು ಸೋಮವಾರ ಕುಟುಂಬದೊಂದಿಗೆ ಶಾಸ್ತ್ರೋಕ್ತವಾಗಿ ಗೃಹಪ್ರವೇಶ ನಡೆಯಲಿದೆ.

ಬೆಂಗಳೂರು, ನವೆಂಬರ್ 16: ಸಿಎಂ ಡಿಕೆ ಶಿವಕುಮಾರ್ ಅವರು ಕುಮಾರಕೃಪಾ ಗೆಸ್ಟ್ ಹೌಸ್‌ಗೆ ಗಂಗಾ ಎಂದು ಮರುನಾಮಕರಣ ಮಾಡಿ, ಅದನ್ನು ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನಾಗಿ ಪರಿವರ್ತಿಸಿದ್ದಾರೆ. ಹಳೆಯ ಕಟ್ಟಡವನ್ನು ಸಂಪೂರ್ಣವಾಗಿ ನವೀಕರಿಸಲಾಗಿದ್ದು, ನಾಮಫಲಕವನ್ನು ಸಹ ಅಳವಡಿಸಲಾಗಿದೆ. ನವೀಕೃತ ಗಂಗಾ ನಿವಾಸದಲ್ಲಿರುವ ಕೊಠಡಿಗಳಿಗೂ ನದಿಗಳ ಹೆಸರುಗಳನ್ನು ಇಡಲಾಗಿದ್ದು, ಹೇಮಾವತಿ, ಶಾಲ್ಮಲ, ತುಂಗಭದ್ರಾ ಎಂದು ಹೆಸರಿಸಲಾಗಿದೆ. ಕಾವೇರಿ ನಿವಾಸ ಮತ್ತು ಕೃಷ್ಣ ಕಚೇರಿಗಳ ಮಾದರಿಯಲ್ಲೇ ಈ ನಿವಾಸಕ್ಕೂ ನದಿ ಹೆಸರಿಡಲಾಗಿದೆ.

ಭಾನುವಾರ ರಾತ್ರಿ ಗಂಗಾ ನಿವಾಸದಲ್ಲಿ ಹೋಮ ಹವನಗಳು ನಡೆದಿದ್ದು, ಇಂದು (ನವೆಂಬರ್ 16) ಕಾರ್ತಿಕ ಮಾಸದ ಸೋಮವಾರದಂದು ಡಿಕೆ ಶಿವಕುಮಾರ್ ಕುಟುಂಬಸ್ಥರು ಹಾಗೂ ಆಪ್ತರೊಂದಿಗೆ ಶಾಸ್ತ್ರೋಕ್ತವಾಗಿ ಗೃಹಪ್ರವೇಶ ಮಾಡುತ್ತಿದ್ದಾರೆ. ಸದಾಶಿವನಗರದಲ್ಲಿದ್ದ ನಿವಾಸದಿಂದ ನಿರ್ವಹಿಸುತ್ತಿದ್ದ ಹಲವು ಸಾರ್ವಜನಿಕ ಕೆಲಸಗಳನ್ನು ಇನ್ನು ಮುಂದೆ ಗಂಗಾ ನಿವಾಸದಿಂದಲೇ ನಿರ್ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಭೇಟಿಗೆ ಬರುವವರಿಗೆ ವಿಶೇಷ ಭದ್ರತಾ ವ್ಯವಸ್ಥೆ ಹಾಗೂ ಪ್ರತ್ಯೇಕ ಮಾರ್ಗವನ್ನೂ ಕಲ್ಪಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More