ನನ್ನನ್ನು ಸೋಲಿಸಲು ರಾಮನಗರದಲ್ಲಿ ಬಿಜೆಪಿ ಕಾಂಗ್ರೆಸ್ ಒಳಒಪ್ಪಂದ: ಕುಮಾರಸ್ವಾಮಿ ಆರೋಪ
ರಾಮನಗರದ ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್ಡಿ ಕುಮಾರಸ್ವಾಮಿ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವಿನ ಒಳಒಪ್ಪಂದದ ಬಗ್ಗೆ ಆರೋಪ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಇಲ್ಲ ಅಂತಾನೂ ಹೇಳಿದ್ದಾರೆ.
ರಾಮನಗರ: ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಲು ರಾಮನಗರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಒಳಒಪ್ಪಂದ ಮಾಡಿಕೊಂಡಿವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ. ಜಿಲ್ಲೆಯ ಚನ್ನಪಟ್ಟಣದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ನನ್ನನ್ನು ಸೋಲಿಸಲು ರಾಷ್ಟ್ರೀಯ ಪಕ್ಷಗಳು ಒಳಪ್ಪಂದ ಮಾಡಿಕೊಂಡಿವೆ. ನಮ್ಮನ್ನು ಬಿ ಟೀಂ ಅಂತಾರೆ, ಶಿಕಾರಿಪುರದಲ್ಲಿ ಕಾಂಗ್ರೆಸ್ ನಾಯಕರು ಏನು ಮಾಡಿದ್ದಾರೆ? ಬಿಜೆಪಿ ಅಭ್ಯರ್ಥಿ ಬಿವೈ ವಿಜಯೇಂದ್ರ (BY Vijayendra) ಅವರನ್ನು ಗೆಲ್ಲಿಸಲು ಕಾಂಗ್ರೆಸ್ಸಿಗರು ಡಮ್ಮಿ ಕ್ಯಾಂಡಿಡೇಟ್ ಹಾಕಿದ್ದಾರೆ. ಇದಕ್ಕೆಲ್ಲ ಜನ ಉತ್ತರ ನೀಡುತ್ತಾರೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸ್ಟೋರಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 17, 2023 04:25 PM
Latest Videos