ನನ್ನನ್ನು ಸೋಲಿಸಲು ರಾಮನಗರದಲ್ಲಿ ಬಿಜೆಪಿ ಕಾಂಗ್ರೆಸ್ ಒಳಒಪ್ಪಂದ: ಕುಮಾರಸ್ವಾಮಿ ಆರೋಪ

Rakesh Nayak Manchi

Updated on: Apr 17, 2023 | 4:25 PM

ರಾಮನಗರದ ಚನ್ನಪಟ್ಟಣದಲ್ಲಿ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ಬಿಜೆಪಿ ಹಾಗೂ ಕಾಂಗ್ರೆಸ್​ ಪಕ್ಷಗಳ ನಡುವಿನ ಒಳಒಪ್ಪಂದದ ಬಗ್ಗೆ ಆರೋಪ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಇಲ್ಲ ಅಂತಾನೂ ಹೇಳಿದ್ದಾರೆ.

ರಾಮನಗರ: ಜೆಡಿಎಸ್ ಅಭ್ಯರ್ಥಿಯನ್ನು ಸೋಲಿಸಲು ರಾಮನಗರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಒಳಒಪ್ಪಂದ ಮಾಡಿಕೊಂಡಿವೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಆರೋಪಿಸಿದ್ದಾರೆ. ಜಿಲ್ಲೆಯ ಚನ್ನಪಟ್ಟಣದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ನನ್ನನ್ನು ಸೋಲಿಸಲು ರಾಷ್ಟ್ರೀಯ ಪಕ್ಷಗಳು ಒಳಪ್ಪಂದ ಮಾಡಿಕೊಂಡಿವೆ. ನಮ್ಮನ್ನು ಬಿ ಟೀಂ ಅಂತಾರೆ, ಶಿಕಾರಿಪುರದಲ್ಲಿ ಕಾಂಗ್ರೆಸ್​ ನಾಯಕರು ಏನು ಮಾಡಿದ್ದಾರೆ? ಬಿಜೆಪಿ ಅಭ್ಯರ್ಥಿ ಬಿವೈ ವಿಜಯೇಂದ್ರ (BY Vijayendra) ಅವರನ್ನು ಗೆಲ್ಲಿಸಲು ಕಾಂಗ್ರೆಸ್ಸಿಗರು ಡಮ್ಮಿ ಕ್ಯಾಂಡಿಡೇಟ್ ಹಾಕಿದ್ದಾರೆ. ಇದಕ್ಕೆಲ್ಲ ಜನ ಉತ್ತರ ನೀಡುತ್ತಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 17, 2023 04:25 PM
Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.