ಕುಮಾರಸ್ವಾಮಿ ಜಮೀನು ಒತ್ತುವರಿ ಪ್ರಕರಣ, ಕೋರ್ಟ್ ಆದೇಶವನ್ನು ಪಾಲಿಸುತ್ತಿದ್ದೇವೆ ಎಂದ ರಾಮನಗರ ಜಿಲ್ಲಾಧಿಕಾರಿ
ಕೇಂದ್ರ ಸಚಿವರೊಬ್ಬ ವಿರುದ್ಧ ಜಮೀನು ಒತ್ತುವರಿ ಕಾರ್ಯಾಚರಣೆ ನಡೆದ ನಿದರ್ಶನಗಳು ಬಹಳ ಅಪರೂಪ. ಕಂದಾಯ ಇಲಾಖೆ ನಡೆಸಿರುವ ಸರ್ವೇಗಳ ಪ್ರಕಾರ ಕೇತಗಾನಹಳ್ಳಿಯ ಸರ್ವೆ ನಂಬರ್ 7, 8, 9, 10, 16, 17 ಮತ್ತು 79ರಲ್ಲಿ ಒತ್ತುವರಿ ಮಾಡಿಕೊಳ್ಳುವ ಕೆಲಸ ನಡೆದಿದೆ ಮತ್ತು ವಿಷಯ ಗೊತ್ತಿದ್ದರೂ ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೆ ಸುಮ್ಮನಿದ್ದ ಕಾರಣ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ರಾಮನಗರ, 18 ಮಾರ್ಚ್: ಜಿಲ್ಲೆಯ ಬಿಡದಿ ಹೋಬಳಿಯಲ್ಲಿರುವ ಕೇತಗಾನಹಳ್ಳಿಯಲ್ಲಿ (Kethaganahalli) ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಜಮೀನಿನ ತೆರವು ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಶುರುಮಾಡಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ರಾಜ್ಯದ ಉಚ್ಚ ನ್ಯಾಯಾಲಯದ ಆದೇಶದಂತೆ ತೆರವು ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ, ಹತ್ತಕ್ಕೂ ಹೆಚ್ಚು ಸರ್ವೆ ನಂಬರ್ಳಲ್ಲಿ ಒತ್ತುವರಿಯಾಗಿದೆ ಎಂದು ಹೇಳಿದರು. ಕುಮಾರಸ್ವಾಮಿ ಅವರಿಂದ ಮಾತ್ರ ಒತ್ತುವರಿ ಅಗಿದೆಯಾ ಅಥವಾ ಬೇರರೆಯವರು ಸಹ ಮಾಡಿದ್ದಾರಾ ಅಂತ ಕೇಳಿದ್ದಕ್ಕೆ ಡಿಸಿ ಉತ್ತರ ನೀಡಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕಾನೂನು ಬಾಹಿರವಾಗಿ ಭೂಮಿ ಇದ್ರೆ ವಶಪಡಿಸಿಕೊಳ್ಳಿ, ಹಾಗೇ ನನ್ನ ಜಮೀನು ಹುಡುಕಿಕೊಡಿ: ಸರ್ಕಾರಕ್ಕೆ ಕುಮಾರಸ್ವಾಮಿ ಪತ್ರ

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ

ಕೋರ್ಟ್ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!

ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
