ಕುಮಾರಸ್ವಾಮಿ ತಾನು ಸಿಎಂ ಆಗಿ ಮಾಡಿದ ಅಭಿವೃದ್ಧಿ ಕೆಲಸಗಳ ಆಧಾರದಲ್ಲಿ ಮತ ಕೇಳಲಿಲ್ಲ: ಸೋಮಶೇಖರ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 25, 2024 | 4:56 PM

ಕುಮಾರಸ್ವಾಮಿಗೆ ತದ್ವಿರುದ್ಧವಾಗಿ ಸಿಪಿ ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರದಲ್ಲಿ ತಾನು ಮಾಡಿದ ಅಭಿವೃದ್ಧಿ ಕೆಲಸಗಳ ಬಗ್ಗೆ, ಕೆರೆಗಳನ್ನು ತುಂಬಿಸಿದ ಬಗ್ಗೆ ಮಾತಾಡುತ್ತಾ ಮತ ಕೇಳಿದರು ಎಂದು ಹೇಳಿದ ಸೋಮಶೇಖರ್, ಶಿಗ್ಗಾವಿ ಮತ್ತು ಸಂಡೂರಲ್ಲಿ ನಡೆದ ಉಪ ಚುನಾವಣೆಗಳ ವಿಷಯದಲ್ಲಿ ತನಗೆ ಹೆಚ್ಚು ಗೊತ್ತಿಲ್ಲ ಎಂದು ಹೇಳಿದರು.

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿಯವರು ಕ್ಷೇತ್ರದ ಶಾಸಕರಾಗಿ ಮತ್ತು ಮುಖ್ಯಮಂತ್ರಿಯಾಗಿ ಮಾಡಿd ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿ ಮತ ಕೇಳದೆ ಮುಡಾ ಪ್ರಕರಣ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕೆಳಗಿಳಿಸುತ್ತೇನೆ ಎಂಬ ಮಾತುಗಳನ್ನು ಹೇಳುತ್ತಾ ಮತ ಕೇಳಿದರು. ಮಾಜಿ ಪ್ರಧಾನಿ ದೇವೇಗೌಡರು ಸಹ ಶಿವಕುಮಾರ್ ಅವರ 40 ವರ್ಷ ಹಿಂದಿನ ಇತಿಹಾಸ ಕೆದಕುತ್ತಾ ಅವರೊಬ್ಬ ರೌಡಿ ಎಂದು ಹೇಳಿದರು. ಅವರ ಈ ಮಾತುಗಳೇ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಕಾರಣವಾದವು ಎಂದು ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯೋಗೇಶ್ವರ್​ಗೆ ಬಿಜೆಪಿಯಲ್ಲಿ ಅನ್ಯಾಯವಾಗಿದೆ, ಚನ್ನಪಟ್ಟಣ ನನ್ನ ಹುಟ್ಟೂರು: ಸೋಮಶೇಖರ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.