ಮುಖ್ಯಮಂತ್ರಿ ಹುದ್ದೆಗಾಗಿ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ: ಹೊಸ ಬಾಂಬ್ ಹಾಕಿದ ಹೆಚ್.ಡಿ. ಕುಮಾರಸ್ವಾಮಿ

Updated on: Apr 27, 2026 | 8:41 PM

ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 40-50 ಶಾಸಕರು ಮುಖ್ಯಮಂತ್ರಿ ಹುದ್ದೆಗಾಗಿ ದೆಹಲಿಗೆ ತೆರಳುತ್ತಿದ್ದಾರೆ. ಆದರೆ ರಾಜ್ಯದಲ್ಲಿನ ಕುಡಿಯುವ ನೀರು ಸಮಸ್ಯೆ, ಬಿಸಿಲು ಮತ್ತು ರೈತರ ಬೆಳೆ ನಷ್ಟದಂತಹ ಗಂಭೀರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕೋಲಾರ, ಏ.27: ಜಿಲ್ಲೆ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಹುದ್ದೆಗಾಗಿ 40 ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಅವರು ಹೇಳಿದರು. ಆದರೆ, ರಾಜ್ಯದಲ್ಲಿ ಈಗ ಜನ ಎದುರಿಸುತ್ತಿರುವ ಕುಡಿಯುವ ನೀರು ಮತ್ತು ಬಿಸಿಲಿನಂತಹ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು. ಅಳಂದದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಒಂದು ರೂಪಾಯಿಯೂ ಇಲ್ಲ, ಪಿಡಿಓಗಳು ಲಭ್ಯರಿಲ್ಲ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಎಂದು ಅವರು ವಿವರಿಸಿದರು. ಮಾಲಿಕಲ್ ಮಳೆಯಿಂದ ದ್ರಾಕ್ಷಿ, ಬಾಳೆ ಮತ್ತು ಮಾವು ಬೆಳೆಗಳು ನಾಶವಾಗಿದ್ದರೂ, ಯಾರೊಬ್ಬರೂ ಮುಖ್ಯಮಂತ್ರಿಗಳ ಬಳಿ ಪರಿಹಾರ ಕೇಳಿಲ್ಲ ಎಂದು ಕುಮಾರಸ್ವಾಮಿ ದೂರಿದರು. ಜನಪ್ರತಿನಿಧಿಗಳು ಜನರ ಕಷ್ಟಗಳ ಬಗ್ಗೆ ಚಿಂತಿಸದೆ, ಅಧಿಕಾರದ ಹಿಂದೆ ಓಡುತ್ತಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More