ಮತ್ತೊಂದು ಬಾಂಬ್ ಸಿಡಿಸಿದ ಕುಮಾರಸ್ವಾಮಿ; ಇಂಧನ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಎಷ್ಟು ಕೋಟಿ ಡೀಲ್ ಗೊತ್ತಾ?
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ದ ವರ್ಗಾವಣೆ ದಂಧೆ ಆರೋಪ ಮಾಡುತ್ತಿದ್ದಾರೆ. ಅದರ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನ ಮೂಡಿಸಿದೆ.
ಬೆಂಗಳೂರು: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಅವರು ಕಾಂಗ್ರೆಸ್ ವಿರುದ್ದ ವರ್ಗಾವಣೆ ದಂಧೆ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ನವರು ಕೂಡ ಪ್ರತಿಕ್ರಿಯೆ ನೀಡುತ್ತಲೇ ಬಂದಿದ್ದಾರೆ. ಅದರ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಅವರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಬಾರೀ ಸಂಚಲನ ಮೂಡಿಸಿದೆ. ಹೌದು ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ವರ್ಗಾವಣೆಗೆ ಹಣವನ್ನ ನಿಗದಿ ಮಾಡಿದ್ದು, ಇಂಧನ ಇಲಾಖೆಯಲ್ಲಿ ಬರೊಬ್ಬರಿ 10 ಕೋಟಿಗೆ ಅಧಿಕಾರಿಗಳ ವರ್ಗಾವಣೆಗೆಯಾಗಿದೆ ಎಂದಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 05, 2023 02:32 PM
Latest Videos