ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ ಮೊನಾಲಿಸಾ

Updated on: Mar 11, 2026 | 9:57 PM

ಮುಸ್ಲಿಂ ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿನಾ ಭೋಸ್ಲೆ ಮದುವೆ ನಡೆದಿದೆ. ತಮ್ಮ ವಿವಾಹಕ್ಕೆ ಕೇರಳವೇ ಸೂಕ್ತ ಮತ್ತು ಸುರಕ್ಷಿತ ಸ್ಥಳ ಎಂದು ತೀರ್ಮಾನಿಸಿ ಮೊನಾಲಿಸಾ ಮತ್ತು ಫರ್ಮಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಒಂದೆಡೆ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಭಾರಿ ವಿರೋಧ ವ್ಯಕ್ತವಾಗಿದೆ. ಇನ್ನೊಂದೆಡೆ ರಿಯಲ್ ಕೇರಳ ಸ್ಟೋರಿ ನಡೆದಿದೆ. ಮುಸ್ಲಿಂ ಪ್ರಿಯಕರ ಮೊಹಮ್ಮದ್ ಫರ್ಮಾನ್ ಜೊತೆ ಮೊನಾಲಿನಾ ಭೋಸ್ಲೆ (Monalisa Bhosle) ಮದುವೆ ನಡೆದಿದೆ. ತಮ್ಮ ವಿವಾಹಕ್ಕೆ ಕೇರಳವೇ ಸೂಕ್ತ ಮತ್ತು ಸುರಕ್ಷಿತ ಸ್ಥಳ ಎಂದು ತೀರ್ಮಾನಿಸಿ ಮೊನಾಲಿಸಾ ಮತ್ತು ಫರ್ಮಾನ್ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಹಿಂದೂ ದೇವಾಲಯದಲ್ಲಿ ಈ ಜೋಡಿಯ ಮದುವೆ ನಡೆದಿದೆ. ಮೊನಾಲಿಸಾಗೆ ಫರ್ಮಾನ್ ಅವರು ತಾಳಿ ಕಟ್ಟಿ, ಕುಂಕುಮ ಇಟ್ಟಿದ್ದಾರೆ. ಕೇರಳದ ಸ್ಥಳೀಯ ಜನರು ಮತ್ತು ರಾಜಕೀಯ ಮುಖಂಡರು ಈ ಮದುವೆ ಬೆಂಬಲ ನೀಡಿದ್ದಾರೆ. ನವ ದಂಪತಿಗೆ ಕೇರಳ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಮೊನಾಲಿಸಾ ಮತ್ತು ಮೊಹಮ್ಮದ್ ಫರ್ಮಾನ್ (Muhammad Farman) ಅವರು ‘ರಿಯಲ್ ಕೇರಳ ಸ್ಟೋರಿ’ ಎಂಬ ಫಲಕ ಪ್ರದರ್ಶಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More