Video: ಯಾಣ ಕಡೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಬಸ್​​​ ಪಲ್ಟಿ, 12 ವಿದ್ಯಾರ್ಥಿಗಳಿಗೆ ಗಾಯ

Edited By:

Updated on: Dec 30, 2025 | 8:56 PM

ಉತ್ತರ ಕನ್ನಡದ ಕುಮಟಾ ತಾಲೂಕಿನ ಯಾಣ ಬಳಿ ದಾವಣಗೆರೆಯ ಜೈನ್ ಪಿಯು ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿಯಾಗಿದೆ. ಶಿರಸಿಯಿಂದ ಯಾಣಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ 20 ವಿದ್ಯಾರ್ಥಿನಿಯರು, 27 ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕರಿದ್ದು, 12 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಮಟಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕುಮಟಾ, ಡಿ. 30: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್​​​ವೊಂದು ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ಬಳಿ ನಡೆದಿದೆ. ಶಿರಸಿಯಿಂದ ಯಾಣ ಕಡೆಗೆ ತೆರಳುತ್ತಿದ್ದಾಗ ಬಸ್​​​ ಪಲ್ಟಿಯಾಗಿದೆ. ದಾವಣಗೆರೆಯ ಜೈನ್​ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಈ ಬಸ್ಸಿನಲ್ಲಿ 20 ವಿದ್ಯಾರ್ಥಿನಿಯರು, 27 ವಿದ್ಯಾರ್ಥಿಗಳು, ಮೂವರು ಶಿಕ್ಷಕರಿದ್ದರು ಎಂದು ಹೇಳಲಾಗಿದೆ. 12 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಿಲಾಗುತ್ತಿದೆ. ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದು ಯಾಣಕ್ಕೆ ಹೋಗುತ್ತಿದ್ದ ವಿದ್ಯಾರ್ಥಿಗಳ ಬಸ್​​ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ