ನಿಂತಿದ್ದ ಪಿಕಪ್ ಟ್ರಕ್ಗೆ ಶಾಲಾ ಮಕ್ಕಳಿದ್ದ ಓಮಿನಿ ಡಿಕ್ಕಿ: ನಡು ರಸ್ತೆಯಲ್ಲಿ ಒದ್ದಾಡಿದ ಮಕ್ಕಳು
ಉತ್ತರ ಕನ್ನಡದ ಕುಮಟಾದಲ್ಲಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮಿನಿ ವಾಹನವು ಬೊಲೆರೊಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಚಾಲಕ ಮತ್ತು ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಎ.ವಿ.ಬಾಳಿಗಾ ಶಾಲೆಯ ವಾಹನ ಇದಾಗಿದ್ದು, ಮಕ್ಕಳನ್ನು ಮನೆಗೆ ಬಿಡುವಾಗ ದುರ್ಘಟನೆ ಸಂಭವಿಸಿದೆ. ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಕಾರವಾರ, ಜ.17: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಓಮಿನಿ ಬೊಲೆರೊ ವಾಹನಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹಳೆ ಬಸ್ ನಿಲ್ಧಾಣದ ಬಳಿ ನಡೆದಿದೆ. ಅಪಘಾತದಲ್ಲಿ ಚಾಲಕ ಸೇರಿ ನಾಲ್ವರು ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಕುಮಟಾದ ಡಾ.ಎ.ವಿ.ಬಾಳಿಗಾ ಆಂಗ್ಮ ಮಾಧ್ಯಮ ಶಾಲೆಯ ವಾಹನ ಎಂದು ಹೇಳಲಾಗಿದೆ. ತನಿಷ್ಕ (15), ಅದ್ವಿತ್ (12), ಅರ್ಜುನ್ (13), ಆಯಿರಾ (10) ಮಕ್ಕಳಿಗೆ ಗಂಭೀರ ಗಾಯಗಳಾಗಿವೆ. ಇದೀಗ ಗಾಯಾಳುಗಳಿಗೆ ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುವ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಕುಮಟಾ ಪೊಲೀಸರಿಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಗ್ಗೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:11 pm, Sat, 17 January 26