Karnataka Assembly Polls; ಟಿಕೆಟ್ ಸಿಗದೆ ನಿರಾಶರಾಗಿರುವ ಧುರೀಣರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣಾ ಕಣದಲ್ಲಿ ಹೋರಾಡುತ್ತೇನೆ: ಕುಸುಮಾ ಶಿವಳ್ಳಿ

Karnataka Assembly Polls; ಟಿಕೆಟ್ ಸಿಗದೆ ನಿರಾಶರಾಗಿರುವ ಧುರೀಣರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣಾ ಕಣದಲ್ಲಿ ಹೋರಾಡುತ್ತೇನೆ: ಕುಸುಮಾ ಶಿವಳ್ಳಿ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Apr 15, 2023 | 4:28 PM

ಕುಂದಗೋಳ ಕ್ಷೇತ್ರದಲ್ಲಿ ಬಹಳಷ್ಟು ಟಿಕೆಟ್ ಆಕಾಂಕ್ಷಿಗಳಿದ್ದರು, ಅವರಿಗೆಲ್ಲ ಸಹಜವಾಗೇ ನಿರಾಸೆಯಾಗಿರುತ್ತದೆ ಎಂದು ಕುಸುಮಾ ಹೇಳಿದರು.

ಹುಬ್ಬಳ್ಳಿ: ಪಕ್ಷದ ಹೈಕಮಾಂಡ್, ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ತಮ್ಮ ಮೇಲೆ ವಿಶ್ವಾಸವಿರಿಸಿ ಕುಂದಗೋಳ ಕ್ಷೇತ್ರದ (Kundgol constituency) ಟಿಕೆಟ್ ನೀಡಿರುವುದಕ್ಕೆ ಕುಸುಮಾ ಶಿವಳ್ಳಿ (Kusuma Shivalli) ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷ ಇಂದು ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು ಕುಸುಮಾಗೆ ಅವರು ಶಾಸಕಿಯಾಗಿರುವ ಕುಂದಗೋಳದಿಂದ ಮತ್ತೊಮ್ಮೆ ಸ್ಪರ್ಧಿಸುವ ಅವಕಾಶ ನೀಡಿದೆ. ಹುಬ್ಬಳ್ಳಿ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಕುಸುಮಾ, ಕುಂದಗೋಳ ಕ್ಷೇತ್ರದಲ್ಲಿ ಬಹಳಷ್ಟು ಟಿಕೆಟ್ ಆಕಾಂಕ್ಷಿಗಳಿದ್ದರು, ಅವರಿಗೆಲ್ಲ ಸಹಜವಾಗೇ ನಿರಾಸೆಯಾಗಿರುತ್ತದೆ ಎಂದರು. ಅವರೆಲ್ಲ ತಮ್ಮ ಅಣ್ಣತಮ್ಮಂದಿರಂತೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಣದಲ್ಲಿ ಹೋರಾಟ ನಡೆಸುವುದಾಗಿ ಕುಸುಮಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ