ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ

Updated on: May 17, 2025 | 10:32 AM

ರಾಗಿಣಿ ದ್ವಿವೇದಿ ಅವರು ‘ಮಜಾ ಟಾಕೀಸ್’ ವೇದಿಕೆ ಮೇಲೆ ಆಗಮಿಸಿದ್ದಾರೆ. ಈ ವೇಳೆ ಕುರಿ ಪ್ರತಾಪ್ ಅವರು ಸಖತ್ ಫನ್ ಮಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ರಾಗಿಣಿ ಅವರ ಮೇಲೆ ಕುರಿ ಪ್ರತಾಪ್ ಅವರು ಫನ್ ಮಾಡಿದ್ದಾರೆ.

ಕುರಿ ಪ್ರತಾಪ್ (Kuri Prathap) ಅವರು ಯಾವಾಗಲೂ ಫನ್ ಆಗಿ ಮಾತನಾಡುತ್ತಾರೆ. ‘ಮಜಾ ಟಾಕೀಸ್’ ಮೇಲೆ ಅವರು ತಮ್ಮ ಕಲೆಯನ್ನು ತೋರಿಸುತ್ತಾರೆ. ಈ ವಾರ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅವರು ವೇದಿಕೆ ಏರಿದ್ದಾರೆ. ವೇದಿಕೆ ಮೇಲೆ ಪ್ರತಾಪ್ ಅವರು ಹಾಸ್ಯದ ಹೊಳೆ ಹರಿಸಿದ್ದಾರೆ. ‘ರಾಗಿಣಿ+ಕುರಿ ಸೇರಿದ್ರೆ ಕುರಾಗಿಣಿ’ ಎಂದಿದ್ದಾರೆ ಕುರಿ. ಈ ಫನ್ ಎಪಿಸೋಡ್​ನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 17, 2025 10:27 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More