ಕರ್ನೂಲ್ ಬಸ್ ದುರಂತ; ಮೃತರ ಕುಟುಂಬಗಳಿಗೆ ಆಂಧ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 19 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್‌ಗೆ ಡಿಕ್ಕಿ ಹೊಡೆದ ಬೈಕ್ ಸವಾರ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 20ಕ್ಕೆ ತಲುಪಿದೆ. ಆಂಧ್ರ ಪ್ರದೇಶ ಸರ್ಕಾರ ಮೃತರಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 19 ಪ್ರಯಾಣಿಕರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಬೈಕ್ ಸವಾರ ಕೂಡ ಸೇರಿ 20 ಜನರು ಮೃತಪಟ್ಟಿದ್ದಾರೆ.
ಕರ್ನೂಲ್, ಅಕ್ಟೋಬರ್ 24: ಆಂಧ್ರಪ್ರದೇಶದ ಕರ್ನೂಲ್ ಬಸ್ ದುರಂತದಲ್ಲಿ (Kurnool Bus Fire Accident) ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ ಘೋಷಿಸಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 19 ಪ್ರಯಾಣಿಕರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ. ಬೈಕ್ ಸವಾರ ಕೂಡ ಸೇರಿ 20 ಜನರು ಮೃತಪಟ್ಟಿದ್ದಾರೆ.
ಇಂದು ಮುಂಜಾನೆ 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಒಂದು ಬೈಕ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಾಗ ಈ ದುರಂತ ಸಂಭವಿಸಿದೆ. ಕರ್ನೂಲ್ ಜಿಲ್ಲೆಯ ತಂಡರಪಡು ಗ್ರಾಮದ ಟಿವಿ9 ಕಾಲೋನಿಯ ನಿವಾಸಿ ಮತ್ತು ಗ್ರಾನೈಟ್ ದಿನಗೂಲಿ ಕಾರ್ಮಿಕ ಶಿವಶಂಕರ್ (21) ಎಂದು ಗುರುತಿಸಲಾದ ಮೋಟಾರ್ ಸೈಕಲ್ ಸವಾರ ಕೂಡ ಈ ಘಟನೆಯಲ್ಲಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 20ಕ್ಕೆ ತಲುಪಿದೆ.
ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ಕರ್ನೂಲ್ನ ಚಿನ್ನಟೇಕುರು ಗ್ರಾಮದ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿತು. ಬೈಕ್ ಬಸ್‌ನ ಕೆಳಗೆ ಸಿಲುಕಿಕೊಂಡು ಡೀಸೆಲ್ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಭಾರೀ ಬೆಂಕಿ ಬಸ್‌ಗೆ ಹರಡಿತು. ಈ ಘಟನೆ ನಡೆದಾಗ ಖಾಸಗಿ ಟ್ರಾವೆಲ್ ಬಸ್ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಆರಂಭದಲ್ಲಿ, ಬಸ್‌ನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಕ್ರಮೇಣ ಬಸ್‌ಗೆ ಪೂರ್ತಿ ಹರಡಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ

