ಆಂಧ್ರದ ಕರ್ನೂಲ್ನಲ್ಲಿ ಬಸ್ ದುರಂತ: ಕರ್ನಾಟಕದವರಿದ್ದಾರಾ? ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ
ಆಂಧ್ರಪ್ರದೇಶದ ಕರ್ನೂಲ್ ಬಳಿ ಸಂಭವಿಸಿದ ಬಸ್ ಅಗ್ನಿ ದುರಂತ ಕುರಿತು ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರತಿಕ್ರಿಯಿಸಿದ್ದಾರೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವಾರು ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕರ್ನಾಟಕದವರು ಇದ್ದಾರೆಯೇ ಎಂದು ಪರಿಶೀಲಿಸಲು ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರು, ಅಕ್ಟೋಬರ್ 24: ಆಂಧ್ರಪ್ರದೇಶದ ಕರ್ನೂಲ್ ಬಳಿ ಸಂಭವಿಸಿದ ಬಸ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವು ಪ್ರಯಾಣಿಕರು ಸಾವನ್ನಪ್ಪಿರುವ ಬಗ್ಗೆ ಬೆಳಗ್ಗೆಯೇ ಮಾಹಿತಿ ಸಿಕ್ಕಿದೆ ಎಂದು ಸಚಿವರು ತಿಳಿಸಿದ್ದಾರೆ. ದುರಂತದಲ್ಲಿ ಕರ್ನಾಟಕದವರು ಯಾರಾದರೂ ಇದ್ದಾರೆಯೇ ಎಂದು ಪತ್ತೆ ಹಚ್ಚಲು ಕೂಡಲೇ ಆರ್‌ಟಿಒ ಅಧಿಕಾರಿಗಳನ್ನು ಕರ್ನೂಲ್ ಬಳಿಯ ಬಾಗೇಪಲ್ಲಿಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
