AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!

ವಿಶ್ವ ದಾಖಲೆ… ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!

ಝಾಹಿರ್ ಯೂಸುಫ್
|

Updated on: Jun 02, 2026 | 8:06 AM

Share

Kushal Bhurtel Records: ಕುಶಾಲ್ ಭುರ್ಟೆಲ್ ಬಾರಿಸಿದ (129) ಈ ಭರ್ಜರಿ ಸೆಂಚುರಿ ನೆರವಿನೊಂದಿಗೆ ಈ ಪಂದ್ಯದಲ್ಲಿ ನೇಪಾಳ ತಂಡವು 20 ಓವರ್​ಗಳಲ್ಲಿ 313 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೀನಾ ತಂಡವು  ಕೇವಲ 92 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ನೇಪಾಳ ತಂಡ 221 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಗೆ ನೇಪಾಳ ತಂಡದ ಸ್ಪೋಟಕ ಆರಂಭಿಕ ಆಟಗಾರ ಕುಶಾಲ್ ಭುರ್ಟೆಲ್ ಸೇರ್ಪಡೆಯಾಗಿದ್ದಾರೆ. ಸಿಂಗಾಪುರ ರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯನ್ ಗೇಮ್ಸ್​ ಟಿ20 ಅರ್ಹತಾ ಪಂದ್ಯದಲ್ಲಿ ಚೀನಾ ವಿರುದ್ಧ ಕುಶಾಲ್ ಒಂದೇ ಒವರ್​ನಲ್ಲಿ ಸತತ 6 ಸಿಕ್ಸ್​ ಬಾರಿಸಿದ್ದಾರೆ.

ಈ ಪಂದ್ಯದ 9ನೇ ಓವರ್​ನ ಎಸೆದ ಚೀನಾದ ಎಡಗೈ ಸ್ಪಿನ್ ಬೌಲರ್ ಚೆನ್ ಝುವೋ ಯುಯೆ ಅವರ ಎಲ್ಲಾ ಎಸೆತಗಳನ್ನು ಭುರ್ಟೆಲ್ ಸಿಕ್ಸರ್​ ಅಟ್ಟಿದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ವಿಶ್ವದ 6ನೇ ಬ್ಯಾಟರ್ ಎನಿಸಿಕೊಂಡರು.

ಇದಕ್ಕೂ ಮುನ್ನ ಯುವರಾಜ್ ಸಿಂಗ್ (ಭಾರತ), ಕೀರನ್ ಪೊಲಾರ್ಡ್ (ವೆಸ್ಟ್ ಇಂಡೀಸ್), ದೀಪೇಂದ್ರ ಸಿಂಗ್ ಐರಿ (ನೇಪಾಳ), ಡೇರಿಯಸ್ ವಿಸರ್ (ಸಮೋವಾ), ಮನನ್ ಬಶೀರ್ (ಬಲ್ಗೇರಿಯಾ) ಮಾತ್ರ ಈ ಸಾಧನೆ ಮಾಡಿದ್ದರು. ಇದೀಗ ಈ ಸಾಧಕರ ಪಟ್ಟಿಗೆ ಕುಶಾಲ್ ಭುರ್ಟೆಲ್ ಕೂಡ ಎಂಟ್ರಿ ಕೊಟ್ಟಿದ್ದಾರೆ.

ಇನ್ನು ಈ ಆರು ಸಿಕ್ಸರ್​ಗಳೊಂದಿಗೆ ಕುಶಾಲ್ ಭುರ್ಟೆಲ್ ಈ ಪಂದ್ಯದಲ್ಲಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ಮೂಲಕ  ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ  7ನೇ ವೇಗದ ಶತಕ ಸಿಡಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಕುಶಾಲ್ ಭುರ್ಟೆಲ್ ಬಾರಿಸಿದ (129) ಈ ಭರ್ಜರಿ ಸೆಂಚುರಿ ನೆರವಿನೊಂದಿಗೆ ಈ ಪಂದ್ಯದಲ್ಲಿ ನೇಪಾಳ ತಂಡವು 20 ಓವರ್​ಗಳಲ್ಲಿ 313 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಚೀನಾ ತಂಡವು  ಕೇವಲ 92 ರನ್‌ಗಳಿಗೆ ಆಲೌಟ್ ಆಗಿದೆ. ಈ ಮೂಲಕ ನೇಪಾಳ ತಂಡ 221 ರನ್​ಗಳ ಭರ್ಜರಿ ಜಯ ಸಾಧಿಸಿದೆ.

 

 

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More