ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿರುವ ಚಿನ್ನಾಭರಣವನ್ನೇ ಕದ್ದ ಕಳ್ಳ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

Edited By:

Updated on: Apr 01, 2026 | 11:17 AM

ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಕಬ್ಬಿಣದ ರಾಡಿನಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಈ ಘಟನೆ ದೇವಸ್ಥಾನದ ಸಿಸಿ ಕ್ಯಾಮೆರಾಗಳಲ್ಲಿ ಸೆರೆವಾಗಿದ್ದು, ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಕಲಬುರಗಿ, ಏಪ್ರಿಲ್ 01: ಜಿಲ್ಲೆಯಲ್ಲಿ ದೇವಸ್ಥಾನ ಕಳ್ಳತನದ ಘಟನೆ ಬೆಳಕಿಗೆ ಬಂದಿದೆ. ನಗರದ ಕುವೆಂಪು ನಗರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕಳ್ಳನು ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹದ ಮೇಲಿದ್ದ ಚಿನ್ನಾಭರಣ ಕದ್ದಿದ್ದಾನೆ. ಕಬ್ಬಿಣದ ರಾಡಿನಿಂದ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಖದೀಮನು ದೇವಿಯ ಕೊರಳಲ್ಲಿದ್ದ ಸುಮಾರು 9 ಗ್ರಾಂ ತೂಕದ ಚಿನ್ನದ ತಾಳಿ ಹಾಗೂ 100 ಗ್ರಾಂ ತೂಕದ ಬೆಳ್ಳಿ ಮುಖವಾಡವನ್ನು ಕಳವು ಮಾಡಿ ಪರಾರಿಯಾಗಿದ್ದಾನೆ. ಈ ಘಟನೆ ದೇವಸ್ಥಾನದ ಸಿಸಿ ಕ್ಯಾಮೆರಾಗಳಲ್ಲಿ ಸೆರೆವಾಗಿದ್ದು, ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಸಂಬಂಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More