ಸಿದ್ರಾಮಣ್ಣನೇ ನಮ್ ಬಂಧು ಬಳಗ ಎಂದು ಹಾಡಿ ಕುಣಿದ ಅಜ್ಜಿ, ವಿಡಿಯೋ ವೈರಲ್
ಚಿತ್ರದುರ್ಗದಲ್ಲಿ ನಡೆದಿದ್ದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ವೇಳೆ ಮಹಿಳೆಯೊಬ್ಬರು ಮಾಡಿದ್ದ ನೃತ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲು ವೈರಲ್ ಆಗಿದೆ.
ಚಿತ್ರದುರ್ಗ, (ಆಗಸ್ಟ್ 31): ಮನೆ ಯಜಮಾನಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ(gruha lakshmi scheme) ನಿನ್ನೆ (ಆಗಸ್ಟ್ 30) ಅದ್ಧೂರಿಯಾಗಿ ಮೈಸೂರಿನಲ್ಲಿ ಚಾಲನೆ ನೀಡಲಾಗಿದೆ. ಮತ್ತೊಂದೆಡೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಹ ಏಕಾಕಾಲಕ್ಕೆ ಚಾಲನೆ ನೀಡಲಾಗಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಇದರ ಮಧ್ಯೆ ಚಿತ್ರದುರ್ಗದಲ್ಲಿ ನಡೆದಿದ್ದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮದ ವೇಳೆ ಮಹಿಳೆಯೊಬ್ಬರು ಮಾಡಿದ್ದ ನೃತ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲು ವೈರಲ್ ಆಗಿದೆ. ರಂಗೇನಹಳ್ಳಿ ಗ್ರಾ, ಪಂಚಾಯಿತಿ ಕಚೇರಿ ಬಳಿ ನಿನ್ನೆ ನಡೆದಿದ್ದ ಕಾರ್ಯಕ್ರಮದಲ್ಲಿ ಶಿಡ್ಲಯ್ಯನಕೋಟೆ ನೀಲಮ್ಮ ಎನ್ನುವರು, ಯಾರಿಗೆ ಯಾರೂ ಇಲ್ಲದೆ ಎಂದು ಹಾಡು ಹೇಳಿದ ಮಹಿಳೆ, 2 ಸಾವಿರ ನೀಡಿದ ಸಿಎಂ ಸಿದ್ಧರಾಮಯ್ಯ ನಮ್ಮ ಬಂಧು ಬಳಗ ಎಂದು ಹಾಡು ಹೇಳಿ ಸಕತ್ ಸ್ಪೆಪ್ ಹಾಕಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

