Belagavi: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ

Edited By:

Updated on: Feb 02, 2026 | 12:17 PM

ಲ್ಯಾಟರೇಟ್ ಗಣಿಕಾರಿಕೆ ದಂಧೆಕೋರರ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಫುಲ್​​ ರೆಬೆಲ್​​ ಆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಮ್ಮ ಸೂಚನೆ ಮೀರಿಯೂ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿರುವ ಆಫೀಸರ್​, ಸ್ಥಳದಲ್ಲಿದ್ದ ಜೆಸಿಬಿಗೆ ಕಲ್ಲು ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ, ಫೆಬ್ರವರಿ 02: ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿಯೋರ್ವರು ಜೆಸಿಬಿ ವಾಹನಕ್ಕೆ ಕಲ್ಲೆಸೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಡೆದಿದೆ. ಅಕ್ರಮವಾಗಿ ನಡೆಯುತ್ತಿದೆ ಲ್ಯಾಟರೇಟ್ ಗಣಿಕಾರಿಕೆ ನಿಲ್ಲಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಬಿಂದನ್ ಪಾಟೀಲ್ ಸೂಚನೆ ನೀಡಿದ್ದರು. ಆದರೆ, ಅಧಿಕಾರಿ ಹೇಳಿದ್ರೂ ಕ್ಯಾರೇ ಎನ್ನದ ದಂಧೆಕೋರರು ತಮ್ಮ ಕೆಲಸ ಮುಂದುವರಿಸಿದ್ದಕ್ಕೆ ಜೆಸಿಬಿಗೆ ಕಲ್ಲು ಹೊಡೆದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More