ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ! ಮಹಾರಾಷ್ಟ್ರ, ಗೋವಾದಿಂದಲೂ ಬಂದ ಲಕ್ಷಾಂತರ ಭಕ್ತರು
ಬೆಳಗಾವಿ, ಫೆಬ್ರುವರಿ 01: ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಭರತ ಹುಣ್ಣಿಮೆ ಜಾತ್ರೆ ಗೆ ಭಕ್ತಸಾಗರವೇ ಹರಿದುಬಂತು. ಉತ್ತರ ಕರ್ನಾಟಕ ಭಾಗದಲ್ಲೇ ಅತಿದೊಡ್ಡ ಮಟ್ಟದಲ್ಲಿ ನಡೆಯುವ ಈ ಜಾತ್ರೆಗೆ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಕರ್ನಾಟಕದ ವಿವಿಧ ಜಿಲ್ಲೆಗಳ ಜೊತೆಗೆ ಮಹಾರಾಷ್ಟ್ರ, ಗೋವಾ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದು, ದೇವಾಲಯ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಜನಸಾಗರ ಕಂಡುಬಂದಿದೆ. ಭಕ್ತರ ಭಾರೀ ಆಗಮನದ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.