ಶಾಸಕಿ ಹೆಸರಲ್ಲಿ ಲಕ್ಷ ಲಕ್ಷ ರೂ. ಬೆಲೆಯಲ್ಲಿ ಆಹಾರ ಕಿಟ್: ಆಹಾರ ಇಲಾಖೆ ಅಧಿಕಾರಿಗಳಿಂದ ದಾಳಿ
ಕೆಜಿಎಫ್ ಶಾಸಕಿ ರೂಪಕಲಾ ಅವರು ಹೆಸರಿನಲ್ಲಿ ಸುಮಾರು ಐವತ್ತು ಲಕ್ಷ ರೂಪಾಯಿ ಬೆಲೆ ಬಾಳುವ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸದ್ದ ಗೋಡೌನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕೋಲಾರ: ಕೆಜಿಎಫ್ ಶಾಸಕಿ ರೂಪಕಲಾ (MLA Roopakala) ಹೆಸರಿನಲ್ಲಿ ಸುಮಾರು ಐವತ್ತು ಲಕ್ಷ ರೂಪಾಯಿ ಬೆಲೆ ಬಾಳುವ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸದ್ದ ಗೋಡೌನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಯುಗಾದಿ ಹಬ್ಬದ ಪ್ರಯುಕ್ತ ಆಹಾರ ಕಿಟ್ ವಿತರಣೆ ಮಾಡಲು ಕೋಲಾರ ತಾಲ್ಲೂಕು ಬ್ಯಾಲಹಳ್ಳಿ ಗ್ರಾಮದ ಬಳಿ ಆಹಾರ ಸಾಮಗ್ರಿಗಳು ಸಂಗ್ರಹಿಸಿದ್ದಾರೆ ಎನ್ನಲಾಗುತ್ತಿದೆ. ಎಸ್ಎಸ್ಎಲ್ವಿ ಸೂಪರ್ ಮಾರ್ಕೆಟ್ ಶ್ರೀನಾಥ್ ಎಂಬುವರಿಗೆ ಗೋಡೌನ್ ಸೇರಿದೆ. ದಾಳಿ ಮಾಡಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Mar 10, 2023 10:56 PM
Latest Videos