AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧಿಗಳ ನಾಶ: ಸರ್ಕಾರಿ ಆಸ್ಪತ್ರೆ ನಡೆಗೆ ಸಾರ್ವಜನಿಕರ ಆಕ್ರೋಶ

ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧಿಗಳ ನಾಶ: ಸರ್ಕಾರಿ ಆಸ್ಪತ್ರೆ ನಡೆಗೆ ಸಾರ್ವಜನಿಕರ ಆಕ್ರೋಶ

ದತ್ತಾತ್ರೇಯ ಪಾಟೀಲ್​
| Edited By: |

Updated on:Aug 21, 2026 | 1:34 PM

Share

ಕಲಬುರಗಿಯ ಅಫಜಲಪುರ ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳನ್ನು ನಾಶಪಡಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಡ ರೋಗಿಗಳಿಗೆ ನೀಡದೆ ಔಷಧಿ ಹಾಳುಮಾಡಿದ ವೈದ್ಯರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ಕಮಿಷನ್ ಆಸೆಗೆ ಬಡವರಿಗೆ ನೀಡಬೇಕಿದ್ದ ಔಷಧಿಗಳು ಹಾಳಾಗಿವೆ ಎಂಬ ಆರೋಪಗಳು ಕೇಳಿಬಂದಿವೆ.

ಕಲಬುರಗಿ, ಆಗಸ್ಟ್​​ 21: ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧಿಗಳನ್ನು ನಾಶ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಬಡ ರೋಗಿಗಳಿಗೆ ನೀಡಬೇಕಿದ್ದ ಔಷಧಿಗಳು ಮಣ್ಣುಪಾಲಾಗಿದ್ದು, ರೋಗಿಗಳಿಗೆ ನೀಡದೆ ಔಷಧಗಳನ್ನು ಹಾಳು ಮಾಡಿದ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ವೈದ್ಯರ ಕಮಿಷನ್ ಆಸೆಗೆ ಸರ್ಕಾರಿ ಔಷಧಿಗಳನ್ನು ನಾಶ ಮಾಡಿ, ಖಾಸಗಿ ಮೆಡಿಕಲ್ ಶಾಪ್​ಗಳಿಗೆ ಚೀಟಿ ಬರೆದುಕೊಡುತ್ತಿದ್ದಾರೆ. ಬಡ ರೋಗಿಗಳ ಆರೈಕೆಗೆ ಸರ್ಕಾರ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡ್ತಿದೆ. ಆದರೆ ಸರ್ಕಾರಿ ಆಸ್ಪತ್ರೆ ವೈದ್ಯರು ಬಡವರ ಬಳಿ ಸುಲಿಗೆ ಮಾಡ್ತಿದ್ದಾರೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Aug 21, 2026 01:33 PM

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More