ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?, ಗ್ರಾಮಸ್ಥರಲ್ಲಿ ಗೊಂದಲ
ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ಕುರಿತು ತೀವ್ರ ಗೊಂದಲ ಉಂಟಾಗಿದೆ. ಪುರಾತತ್ವ ಇಲಾಖೆ ಇದು ನಿಧಿಯಲ್ಲ ಎಂದ ಬೆನ್ನಲ್ಲೇ, ಗ್ರಾಮಸ್ಥರು ಮತ್ತು ಕುಟುಂಬ ಸದಸ್ಯರು ತಮ್ಮ ಪೂರ್ವಜರ ಆಸ್ತಿಯನ್ನು ಮರಳಿ ಕೊಡಿ ಎಂದು ಹೇಳುತ್ತಿದ್ದಾರೆ. ಅಲ್ಲದೆ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ವಾಸ್ತವ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗದಗ, ಜನವರಿ 12: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನ ಪತ್ತೆಯಾದ ಪ್ರಕರಣದಲ್ಲಿ ಹಲವು ಗೊಂದಲಗಳು ಉಂಟಾಗಿವೆ. ಮನೆ ನಿರ್ಮಾಣದ ಅಡಿಪಾಯದ ಕೆಲಸದ ವೇಳೆ ಸುಮಾರು 1 ಕೆ.ಜಿ. ಚಿನ್ನ ಪತ್ತೆಯಾದ ಬಳಿಕ, ಪುರಾತತ್ವ ಇಲಾಖೆಯ ಅಧಿಕಾರಿಗಳು ಇದು ನಿಧಿ ಅಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಇದು ನಿಧಿ ಅಲ್ಲದಿದ್ದರೆ ನಮ್ಮ ಬಂಗಾರ ನಮಗೆ ವಾಪಸ್ ಕೊಡಿ ಎಂದು ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಈ ವಿಷಯ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರೂ ಜಿಲ್ಲಾಡಳಿತ, ವಿಶೇಷವಾಗಿ ಗದಗ ಜಿಲ್ಲಾಧಿಕಾರಿಗಳು ಈವರೆಗೂ ಗ್ರಾಮಕ್ಕೆ ಭೇಟಿ ನೀಡಿಲ್ಲ ಅಥವಾ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ ಎನ್ನಲಾಗಿದೆ. ಇದರಿಂದಾಗಿ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಇದು ನಿಧಿಯೋ ಅಥವಾ ಪೂರ್ವಜರ ಆಸ್ತಿಯೋ ಎಂಬುದನ್ನು ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
