AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್: ಅದು ನಮ್ಮ ಬಂಗಾರ ವಾಪಸ್​ ನೀಡಿ

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಪುರಾತತ್ವ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಇದು ನಿಧಿ ಅಲ್ಲ, ಬದಲಾಗಿ ಕುಟುಂಬದ ಹಿರಿಯರು ಇಟ್ಟ ಚಿನ್ನ ಎಂದು ಹೇಳಿದ್ದಾರೆ. ಈ ಹೇಳಿಕೆ ಬಳಿಕ, ಚಿನ್ನವನ್ನು ಸರ್ಕಾರಕ್ಕೆ ಪ್ರಾಮಾಣಿಕವಾಗಿ ನೀಡಿದ್ದ ಕುಟುಂಬ, ಈಗ ಅದನ್ನು ತಮಗೆ ವಾಪಸ್ ನೀಡುವಂತೆ ಗ್ರಾಮಸ್ಥರ ಬೆಂಬಲದೊಂದಿಗೆ ಒತ್ತಾಯಿಸುತ್ತಿದೆ.

ಅಕ್ಷಯ್​ ಪಲ್ಲಮಜಲು​​
|

Updated on: Jan 11, 2026 | 4:52 PM

Share

ಗದಗ, ಜ.11: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆಯ ಅಡಿಪಾಯ ಹಾಕುವಾಗ ದೊರೆತ ಚಿನ್ನದ ಪ್ರಕರಣದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಆರಂಭದಲ್ಲಿ, ಇದು ನಿಧಿ ಎಂದು ಪರಿಗಣಿಸಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಲಾಗಿತ್ತು. ಆದರೆ, ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ಇದು ನಿಧಿ ಅಲ್ಲ, ಬದಲಿಗೆ ಕುಟುಂಬದ ಹಿರಿಯರು ತಮ್ಮ ಮನೆಯಲ್ಲೇ ಇಟ್ಟಿದ್ದ ಬಂಗಾರ ಎಂದು ಸ್ಪಷ್ಟಪಡಿಸಿದ್ದಾರೆ. ಪುರಾತತ್ವ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ಮೂಲಿಮನಿ ಅವರು, ಪತ್ತೆಯಾದ ಚಿನ್ನವು ಪ್ರಾಚೀನ ನಿಧಿಯ ವರ್ಗಕ್ಕೆ ಸೇರುವುದಿಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆಯು ಇಡೀ ಗ್ರಾಮಸ್ಥರು ಮತ್ತು ಚಿನ್ನ ಸಿಕ್ಕ ಕುಟುಂಬದ ಮನಸ್ಥಿತಿಯನ್ನು ಬದಲಾಯಿಸಿದೆ. ಅಧಿಕಾರಿಗಳ ಸ್ಪಷ್ಟನೆ ಬೆನ್ನಲ್ಲೇ, ಇದು ನಿಧಿ ಅಲ್ಲದಿದ್ದರೆ, ನಮ್ಮದೇ ಆದ ಚಿನ್ನವನ್ನು ನಮಗೆ ವಾಪಸ್ ಕೊಡಿ ಎಂದು ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಈಗ ತೀವ್ರವಾಗಿ ಒತ್ತಾಯಿಸುತ್ತಿದ್ದಾರೆ. ಮೊದಲಿಗೆ ಸರ್ಕಾರಕ್ಕೆ ಒಪ್ಪಿಸಲು ಸಮ್ಮತಿಸಿದ್ದ ಕುಟುಂಬ, ಈಗ ಚಿನ್ನದ ಮರುಪಡೆಯುವಿಕೆಗೆ ಪಟ್ಟು ಹಿಡಿದಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ