10ನೇ ದಿನ ಉತ್ಖನನ ವೇಳೆ ಕೋಟೆ ವೀರಭದ್ರೇಶ್ವರ ದೇಗುಲದ ಬಳಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆ ವತಿಯಿಂದ ಕಳೆದ 10 ದಿನಗಳಿಂದ ಉತ್ಖನನ ಕಾರ್ಯ ನಡೆಸುತ್ತಿವೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ 10×10 ಅಳತೆಯ ನಾಲ್ಕು ಬಾಕ್ಸ್‌ಗಳಲ್ಲಿ ಉತ್ಖನನ ನಡೆಯುತ್ತಿದ್ದು, 10ನೇ ದಿನವಾದ ಇಂದು (ಜನವರಿ 27) ಉತ್ಖನನ ವೇಳೆ ಪ್ರಾಚ್ಯಾವಶೇಷ ಪತ್ತೆಯಾಗಿದೆ. ಹೌದು..ದೇವಕೋಷ್ಠದ ಮೇಲಿನ ಶಿಖರದ ಪ್ರಾಚ್ಯಾವಶೇಷ ಪತ್ತೆಯಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಗದಗ, (ಜನವರಿ 27): ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಇಲಾಖೆ ವತಿಯಿಂದ ಕಳೆದ 10 ದಿನಗಳಿಂದ ಉತ್ಖನನ ಕಾರ್ಯ ನಡೆಸುತ್ತಿವೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ 10×10 ಅಳತೆಯ ನಾಲ್ಕು ಬಾಕ್ಸ್‌ಗಳಲ್ಲಿ ಉತ್ಖನನ ನಡೆಯುತ್ತಿದ್ದು, 10 ಅಡಿ ಆಳ ತೆಗೆದಿರುವುದರಿಂದ A-1 ಬಾಕ್ಸ್‌ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಯಾವುದೇ ಕ್ಷಣದಲ್ಲಿ ಮಣ್ಣು ಕುಸಿಯುವ ಆತಂಕ ಸಿಬ್ಬಂದಿಗಳನ್ನು ಕಾಡುತ್ತಿದೆ. ಇನ್ನು B-1 ಬ್ಲಾಕ್‌ನಲ್ಲಿ ಬೃಹತ್ ಗಾತ್ರದ ಕಲ್ಲು ಪತ್ತೆಯಾಗಿದ್ದು, ಕಲ್ಲು ಬೀಳುವ ಭೀತಿ ಉಂಟಾಗಿದೆ. A-ಬ್ಲಾಕ್‌ನಲ್ಲಿ ಬಂಡೆಗಳ ಸಮೂಹ ಇರುವುದರಿಂದ ಉತ್ಖನನ ಕಾರ್ಯಕ್ಕೆ ತೀವ್ರ ತೊಂದರೆ ಎದುರಾಗಿದೆ. ಸುಮಾರು 35 ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಅಪಾಯಕಾರಿ ಪರಿಸ್ಥಿತಿಗಳ ನಡುವೆ ಉತ್ಖನನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. 10ನೇ ದಿನವಾದ ಇಂದು (ಜನವರಿ 27) ಉತ್ಖನನ ವೇಳೆ ಪ್ರಾಚ್ಯಾವಶೇಷ ಪತ್ತೆಯಾಗಿದೆ. ಹೌದು..ದೇವಕೋಷ್ಠದ ಮೇಲಿನ ಶಿಖರದ ಪ್ರಾಚ್ಯಾವಶೇಷ ಪತ್ತೆಯಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
