ಪ್ರಾಮಾಣಿಕತೆಗೆ ಸಿಕ್ಕ ಪ್ರತಿಫಲ: ನಿಧಿ ಕೊಟ್ಟಿದ್ದಕ್ಕೆ ಸೈಟ್, ರಿತ್ತಿ ಕುಟುಂಬ ಫುಲ್ ಖುಷ್

Edited By:

Updated on: Jan 22, 2026 | 5:25 PM

ಇಂದಿನ ದಿನಗಳಲ್ಲಿ ಅಪರೂಪವಾಗುತ್ತಿರುವ ಪ್ರಾಮಾಣಿಕತೆಗೆ ಲಕ್ಕುಂಡಿ ಗ್ರಾಮ ಪಂಚಾಯಿತಿ ಬೆಲೆ ನೀಡಿದೆ. ಹೌದು...ಲಕ್ಕುಂಡಿ ಗ್ರಾಮದಲ್ಲಿ ರಿತ್ತಿ ಕುಟುಂಬ ಮನೆಯ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಸಿಕ್ಕಿದ್ದು, ಕೂಡಲೇ ಪ್ರಜ್ವಲ್ ಎನ್ನುವ ಬಾಲಕ ಅದನ್ನು ಸರ್ಕಾರಕ್ಕೆ ಒಪ್ಪಿಸಿ ಪ್ರಮಾಣಿಕತೆ ಮೆರೆದಿದ್ದಾನೆ. ಇದೀಗ ಈ ಪ್ರಮಾಣಿಕತೆಗೆ ಲಕ್ಕುಂಡಿ ಗ್ರಾಮ ಪಂಚಾಯಿತಿ ರಿತ್ತಿ ಕುಟುಂಬಕ್ಕೆ ಸೈಟ್ ನೀಡಿದೆ. ಇಂದು (ಜನವರಿ 22) ಲಕ್ಕುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಚಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ವಿಶೇಷ ಸಭೆಯಲ್ಲಿ ರಿತ್ತಿ ಕುಟುಂಭಕ್ಕೆ 30 ಬೈ 40 ಅಳತೆಯ ಜಾಗ ನೀಡಲು ತೀರ್ಮಾನಿಸಿದೆ. ಇದಕ್ಕೆ ರಿತ್ತಿ ಕುಟುಂಬ ಫುಲ್ ಖುಷ್ ಆಗಿದ್ದು, ಆ ಸಂತೋಷನ್ನು ಟಿವಿ9 ಮೂಲಕ ವ್ಯಕ್ತಪಡಿಸಿದೆ.

ಗದಗ, (ಜನವರಿ 22): ಇಂದಿನ ದಿನಗಳಲ್ಲಿ ಅಪರೂಪವಾಗುತ್ತಿರುವ ಪ್ರಾಮಾಣಿಕತೆಗೆ ಲಕ್ಕುಂಡಿ ಗ್ರಾಮ ಪಂಚಾಯಿತಿ (Lakkundi Gram Panchayat) ಬೆಲೆ ನೀಡಿದೆ. ಹೌದು…ಲಕ್ಕುಂಡಿ ಗ್ರಾಮದಲ್ಲಿ ರಿತ್ತಿ ಕುಟುಂಬ ಮನೆಯ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಸಿಕ್ಕಿದ್ದು, ಕೂಡಲೇ ಪ್ರಜ್ವಲ್ ಎನ್ನುವ ಬಾಲಕ ಅದನ್ನು ಸರ್ಕಾರಕ್ಕೆ ಒಪ್ಪಿಸಿ ಪ್ರಮಾಣಿಕತೆ ಮೆರೆದಿದ್ದಾನೆ. ಇದೀಗ ಈ ಪ್ರಮಾಣಿಕತೆಗೆ ಲಕ್ಕುಂಡಿ ಗ್ರಾಮ ಪಂಚಾಯಿತಿ ರಿತ್ತಿ ಕುಟುಂಬಕ್ಕೆ ಸೈಟ್ ನೀಡಿದೆ. ಇಂದು (ಜನವರಿ 22) ಲಕ್ಕುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಚಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ವಿಶೇಷ ಸಭೆಯಲ್ಲಿ ರಿತ್ತಿ ಕುಟುಂಭಕ್ಕೆ 30 ಬೈ 40 ಅಳತೆಯ ಜಾಗ ನೀಡಲು ತೀರ್ಮಾನಿಸಿದೆ. ಇದಕ್ಕೆ ರಿತ್ತಿ ಕುಟುಂಬ ಫುಲ್ ಖುಷ್ ಆಗಿದ್ದು, ಆ ಸಂತೋಷನ್ನು ಟಿವಿ9 ಮೂಲಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಲಕ್ಕುಂಡಿ: ಸಿಕ್ಕ ಚಿನ್ನದ ನಿಧಿ ಸರ್ಕಾರಕ್ಕೆ ಒಪ್ಪಿಸಿದ್ದ ಕುಟುಂಬಕ್ಕೆ ಬಂಪರ್ ಗಿಫ್ಟ್​,!

Published on: Jan 22, 2026 05:16 PM
Loading...
Unable to load recommendations.
Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More