ಲಕ್ಷ್ಮಣ ಸವದಿ ಕಣ್ಣೆದುರಲ್ಲೇ ಹಾರ್ಟ್ ಅಟ್ಯಾಕ್! ಶಾಸಕನ ಮುಂದೇ ಪ್ರಾಣಬಿಟ್ಟ ಆಪ್ತ
ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಮನಕಲಕುವ ಘಟನೆಯೊಂದು ಸಂಭವಿಸಿದೆ. ಶಾಸಕ ಲಕ್ಷ್ಮಣ ಸವದಿ ಅವರ ಆತ್ಮೀಯ ಬೆಂಬಲಿಗರಾದ ರಾವಸಾಬ ಬೇವನೂರ (65) ಅವರು ಶಾಸಕರ ಕಣ್ಣೆದುರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗ್ರಾಮದಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶಾಸಕರು ತೆರಳಿದ್ದರು. ಈ ಸಂದರ್ಭದಲ್ಲಿ ರಾವಸಾಬ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ.
ಬೆಳಗಾವಿ, ಏಪ್ರಿಲ್ 25: ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಮನಕಲಕುವ ಘಟನೆಯೊಂದು ಸಂಭವಿಸಿದೆ. ಶಾಸಕ ಲಕ್ಷ್ಮಣ ಸವದಿ ಅವರ ಆತ್ಮೀಯ ಬೆಂಬಲಿಗರಾದ ರಾವಸಾಬ ಬೇವನೂರ (65) ಅವರು ಶಾಸಕರ ಕಣ್ಣೆದುರಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗ್ರಾಮದಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶಾಸಕರು ತೆರಳಿದ್ದರು. ಈ ಸಂದರ್ಭದಲ್ಲಿ ರಾವಸಾಬ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಶಾಸಕರೇ ಮುತುವರ್ಜಿ ವಹಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದರೂ ಸಹ, ಚಿಕಿತ್ಸೆ ಫಲಕಾರಿಯಾಗದೆ ರಾವಸಾಬ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ತಮ್ಮ ಬಹುಕಾಲದ ಆಪ್ತನನ್ನು ಕಳೆದುಕೊಂಡ ಶಾಸಕ ಲಕ್ಷ್ಮಣ ಸವದಿ ಅವರು ತೀವ್ರ ಕಂಬನಿ ಮಿಡಿದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
