Karnataka Assembly Polls: ರಮೇಶ್ ಜಾರಕಿಹೊಳಿ ಪ್ರತಿನಿಧಿಸುವ ಗೋಕಾಕ್ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಲಕ್ಷ್ಮಿ ಹೆಬ್ಬಾಳ್ಕರ್

|

Updated on: Apr 24, 2023 | 4:24 PM

ವೃತ್ತಿಯಲ್ಲಿ ವೈದ್ಯರಾಗಿರುವುದರಿಂದ ಜನರ ಕಷ್ಟಗಳಿಗೆ ಸ್ಪಂದಿಸುವ ಮನಸ್ಸು ಕಡಾಡಿ ಅವರಿಗಿದೆ, ಹಾಗಾಗಿ ಅವರನ್ನು ಗೆಲ್ಲಿಸಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು.

ಬೆಳಗಾವಿ: ರಮೇಶ್ ಜಾರಕಿಹೊಳಿ (Ramesh Jarkiholi) ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ನಡುವಿನ ರಾಜಕೀಯ ವೈರತ್ವ ಎಲ್ಲರಿಗೂ ಗೊತ್ತಿ. ಬೆಳಗಾವಿ ಜಿಲ್ಲೆಯಲ್ಲಿ ಇವರಿಬ್ಬರೂ ಪ್ರಬಲ ನಾಯಕರು ಅನ್ನೋದ್ರಲ್ಲಿ ಎರಡು ಮಾತಿಲ್ಲ. ಇವತ್ತು ಲಕ್ಷ್ಮಿ ಗೋಕಾಕ್ ನಲ್ಲಿ ಅಂದರೆ ಸಾಹುಕಾರನ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ರಮೇಶ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮಿಯವರನ್ನು ಸೋಲಿಸುವ ಪಣ ತೊಟ್ಟಿದ್ದಾರೆ. ಹಾಗೆಯೇ, ಲಕ್ಷ್ಮಿ ಗೋಕಾಕ್ ನಲ್ಲಿ ರಮೇಶ್ ರನ್ನು ಸೋಲಿಸುವ ಹವಣಿಕೆಯಲ್ಲಿದ್ದಾರೆ. ಹಣದ ಅಮಿಷಕ್ಕೊಳಗಾಗದೆ, ಯಾವುದೇ ಬೆದರಿಕೆಗಳಿಗೆ ಜಗ್ಗದೆ ಭಾರತದ ಸಂವಿಧಾನ ನೀಡಿರುವ ಹಕ್ಕನ್ನು ನಿರ್ಭೀತಿಯಿಂದ ಚಲಾಯಿಸಿ ಎಂದು ಅವರು ಮತದಾರರಿಗೆ ಕರೆ ನೀಡಿದರು. ಕಾಂಗ್ರೆಸ್ ಅಭ್ಯರ್ಥಿ ಡಾ ಮಹಾಂತೇಶ್ ಕಡಾಡಿ (Dr Mahantesh Kadadi) ವಯಸ್ಸಿನಲ್ಲಿ ಚಿಕ್ಕವರಾದರೂ ವಿಶಾಲ ಹೃದಯಿಯಾಗಿದ್ದಾರೆ, ವೃತ್ತಿಯಲ್ಲಿ ವೈದ್ಯರಾಗಿರುವುದರಿಂದ ಜನರ ಕಷ್ಟಗಳಿಗೆ ಸ್ಪಂದಿಸುವ ಮನಸ್ಸು ಅವರಿಗಿದೆ, ಹಾಗಾಗಿ ಅವರನ್ನು ಗೆಲ್ಲಿಸಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮತದಾರರಿಗೆ ಮನವಿ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ