ಕಾರು ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಬೆನ್ನು ಮೂಳೆ ಮುರಿತ, ಮೆದುಳು ಬಾವು; ವೈದ್ಯರ ಶಾಕಿಂಗ್​ ಹೇಳಿಕೆ

ಕಾರು ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್​ ಬೆನ್ನು ಮೂಳೆ ಮುರಿತ, ಮೆದುಳು ಬಾವು; ವೈದ್ಯರ ಶಾಕಿಂಗ್​ ಹೇಳಿಕೆ

Sahadev Mane
| Updated By: ವಿವೇಕ ಬಿರಾದಾರ

Updated on: Jan 14, 2025 | 11:01 AM

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್​ ಬೆನ್ನಿನ ಮೂಳೆ ಮುರಿದಿದೆ. ಮತ್ತು ಮೆದುಳು ಬಾವು ಬಂದಿದೆ. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಅವರು ಶೀಘ್ರದಲ್ಲೇ ಗುಣಮುಖರಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಅಪಘಾತ ಕಿತ್ತೂರು ತಾಲೂಕಿನಲ್ಲಿ ಸಂಭವಿಸಿದೆ.

ಬೆಳಗಾವಿ, ಜನವರಿ 14: ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಮಾತನಾಡಿ, “ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ. ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ” ಎಂದು ಹೇಳಿದರು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದೆ.