ಕಾರು ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ, ಮೆದುಳು ಬಾವು; ವೈದ್ಯರ ಶಾಕಿಂಗ್ ಹೇಳಿಕೆ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನಿನ ಮೂಳೆ ಮುರಿದಿದೆ. ಮತ್ತು ಮೆದುಳು ಬಾವು ಬಂದಿದೆ. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈದ್ಯರು ಅವರು ಶೀಘ್ರದಲ್ಲೇ ಗುಣಮುಖರಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ಅಪಘಾತ ಕಿತ್ತೂರು ತಾಲೂಕಿನಲ್ಲಿ ಸಂಭವಿಸಿದೆ.
ಬೆಳಗಾವಿ, ಜನವರಿ 14: ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಮಾತನಾಡಿ, “ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿನ ಎಲ್ 1 ಮತ್ತು ಎಲ್ 4 ಮೂಳೆ ಮುರಿತವಾಗಿದೆ. ಕುತ್ತಿಗೆಗೆ ಪೆಟ್ಟಿಗೆ ಬಿದ್ದಿದೆ. ಮೆದುಳು ಬಾವು ಬಂದಿದೆ. ಹೀಗಾಗಿ ಚಿಕಿತ್ಸೆ ನೀಡುತ್ತಿದ್ದೇವೆ. ಶೀಘ್ರದಲ್ಲೇ ಗುಣಮುಖರಾಗುತ್ತಾರೆ” ಎಂದು ಹೇಳಿದರು. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದೆ.