Karnataka Assembly Polls: ಕುಟುಂಬ ಸಮೇತರಾಗಿ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್

|

Updated on: May 10, 2023 | 10:19 AM

ಲಕ್ಷ್ಮಿ ಹೆಬ್ಬಾಳ್ಕರ್ ಜೊತೆ ಸಹೋದರ ಮತ್ತು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಅವರನ್ನು ಸಹ ನೋಡಬಹುದು.

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಿಜಯನಗರದ ಮರಾಠಿ ಶಾಲೆಯೊಂದರಲ್ಲಿ (Marathi school) ತಮ್ಮ ಮತ ಚಲಾಯಿಸಿದರು. ಲಕ್ಷ್ನಿ, ಮತಗಟ್ಟೆಗೆ ಕುಟುಂಬದ ಸದಸ್ಯರೊಂದಿಗೆ ಆಗಮಿಸಿದರು. ಮತ ಚಲಾಯಿಸಲು ಬಂದಾಗ ಕೈಯಲ್ಲಿ ಅವರ ಆರಾಧ್ಯ ದೈವ ನೊಣವಿನಕೆರೆ ಅಜ್ಜಯ್ಯನ ಫೋಟೋ ಇತ್ತು. ಲಕ್ಷ್ಮಿ ಹೆಬ್ಬಾಳ್ಕರ್ ಜೊತೆ ಸಹೋದರ ಮತ್ತು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ (Channaraj Hattiholi) ಅವರನ್ನು ಸಹ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ